ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ಇಲಾಖೆಯ ಎಡಿಜಿಪಿ ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಗಲಭೆ ಕೇಸ್ಗೆ ಇದು ತಲೆದಂಡವೇ ಎಂದು ಪ್ರಶ್ನೆ ಉದ್ಭವಿಸಿದೆ.
ಇದನ್ನೂ ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಲ್ಲಿ ಕ್ಷಮೆಯಾಚಿಸಿದ ಹೋಟೆಲ್ ಮಾಲೀಕ, ಏನಿದು ಪ್ರಕರಣ?
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ ಶರತ್ ಚಂದ್ರ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಈ ಹಿಂದೆ ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ಅಂದರೆ 2013 ರಿಂದ 18ರಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರು. ಇದೀಗ ಮತ್ತೆ ಹೇಮಂತ್ ನಿಂಬಾಳ್ಕರ್ಗೆ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ.
ನಾಗಮಂಗಲ ಗಲಭೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಈ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ. ಈ ಮಧ್ಯೆ ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ? ಮತ್ತಷ್ಟು ಅನುಮಾನ ಮತ್ತು ಕುತೂಹಲ ಕೆರಳಿಸಿದೆ.
ಐಎಎಸ್ ಕೋಚಿಂಗ್ ಸೆಂಟರ್ನಲ್ಲಿ ಆಕಾಂಕ್ಷಿಗಳ ಸಾವು ಪ್ರಕರಣ; ನಾಲ್ವರಿಗೆ ಜಾಮೀನು ಮಂಜೂರು