More

    ಪ್ರವಾಸಿ ತಾಣಗಳಿಗೆ ಮಧ್ಯಾಹ್ನದ ನಂತರ ಕರೆದೊಯ್ಯಿರಿ: ಮತದಾನದ ಪ್ರಮಾಣ ಹೆಚ್ಚಿಸಲು ಕ್ರಮ

    ಬೆಂಗಳೂರು: ಮತದಾನದ ಪ್ರಮಾಣ ಹೆಚ್ಚಿಸಲು ಏ.೨೬ ರಂದು ಮತದಾನ ಮಾಡಿದ ನಂತರ ಅಂದರೆ ಮಧ್ಯಾಹ್ನದ ನಂತರ ಪ್ರಯಾಣಿಕರನ್ನು ಪ್ರವಾಸಿ ತಾಣಗಳಿಗೆ ಕರೆದೊಯ್ಯಲು ಸಾರಿಗೆ ಸಂಘ ಸಂಸ್ಥೆಗಳು ಒಪ್ಪಿಗೆ ಸೂಚಿಸಿವೆ.
    ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಲೋಕಾಸಭಾ ಚುನಾವಣಾ ಸಂಬಂಧ ಮ್ಯಾಕ್ಸಿ ಕ್ಯಾಬ್, ಸ್ಟೇಜ್ ಕ್ಯಾರೇಜ್, ಕಾಂಟ್ರಾಕ್ಟ್ ಕ್ಯಾರೇಜ್ ಹಾಗೂ ಇತರೆ ಸಾರಿಗೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ನಡೆಸಲಾಯಿತು.
    ಈ ಸಭೆಯಲ್ಲಿ ಬೆಂಗಳೂರಿನಿಂದ ಪ್ರವಾಸಿ ತಾಣಗಳಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ತೆರಳುವವರು ಇದ್ದಲ್ಲಿ ಮತದಾನ ಮಾಡಿದ ಬಳಿಕ ಮಧ್ಯಾಹ್ನದ ನಂತರ ಕರೆದೊಯ್ಯಲು ವಿನಂತಿಸಿದ ಮೇರೆಗೆ ಇದಕ್ಕೆ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಒಮ್ಮತದಿಂದ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಸೂಕ್ತ ಕ್ರಮ ವಹಿಸಲು ಜಿಲ್ಲಾ ಚುನಾವಣಾಧಿಕಾರಿಗಳು ಸಾರಿಗೆ ಆಯುಕ್ತರಿಗೆ ಸೂಚಿಸಿದ್ದಾರೆ.
    ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ದಿನ ಧಾರ್ಮಿಕ ಕ್ಷೇತ್ರಗಳಿಗೆ, ಪ್ರವಾಸಿ ತಾಣಗಳಿಗೆ, ಸ್ವಗ್ರಾಮಗಳಿಗೆ ತೆರಳುವ ಸಾಧ್ಯೆತೆಗಳು ಹೆಚ್ಚಾಗಿರುವುದರಿಂದ ಮತದಾನದ ಪ್ರಮಾಣ ಹೆಚ್ಚಿಸಲು ಹಾಗೂ ಸಾರ್ವಜನಿಕರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಬಾಡಿಗೆ ಪಡೆದ ಪ್ರಯಾಣಿಕರ ಬಳಿ ಮುಂಚಿತವಾಗಿ ತಿಳಿಸಿ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಸಲು ಸಹಕರಿಸುವಂತೆ ಸಾರಿಗೆ ಸಂಘಟನೆಗಳಿಗೆ ಸಾರಿಗೆ ಆಯುಕ್ತರು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts