More

    ಮಧ್ಯಾಹ್ನ 12ರ ವರೆಗೆ ವ್ಯಾಪಾರ, ನಂತರ ಸ್ತಬ್ಧ

    ಬೈಲಹೊಂಗಲ: ವ್ಯಾಪಾರಸ್ಥರು, ಸಾರ್ವಜನಿಕರ ಸ್ವಯಂ ಪ್ರೇರಣೆಯ ನಿರ್ಧಾರದ ಮೇರೆಗೆ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಟ್ಟಣದಲ್ಲಿ ಘೋಷಿಸಿರುವ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೆ ಮಾತ್ರ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ಕಲ್ಪಿಸಿದ್ದರಿಂದ ಸಾರ್ವಜನಿಕರು ನಿಗದಿತ ಅವಧಿಯಲ್ಲಿ ವ್ಯಾಪಾರಕ್ಕೆ ಮುಂದಾದರು. ನಂತರ ಪಟ್ಟಣ ಸ್ತಬ್ಧವಾಯಿತು.

    ಗ್ರಾಮೀಣ ಪ್ರದೇಶಕ್ಕೆ ತೆರಳುವ ಬಸ್‌ಗಳು ಬೆಳಗ್ಗೆ 7ರಿಂದ 12 ಗಂಟೆವರೆಗೆ ಮಾತ್ರ ಪ್ರಾರಂಭವಿದ್ದವು. ಸರ್ಕಾರಿ ಕಚೇರಿಗಳು, ಬ್ಯಾಂಕ್, ಪೆಟ್ರೋಲ್ ಬಂಕ್, ಆಸ್ಪತ್ರೆ, ಮೆಡಿಕಲ್ ಶಾಪ್, ಹಾಲು ವಿತರಣೆ ಮಳಿಗೆಗಳು ಎಂದಿನಂತೆ ಕಾರ್ಯನಿರ್ವಹಿಸದವು. ನಿಯಮ ಮೀರಿ ರಸ್ತೆಗಿಳಿದ ವಾಹನ ಸವಾರರು ಹಾಗೂ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts