More

    ಮತ್ತೆ ಕರೊನಾ ಅಟ್ಟಹಾಸ: ರಾಜ್ಯಾದ್ಯಂತ ಇಂದು ಒಂದೇ ದಿನ 21 ಮಂದಿ ಬಲಿ

    ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯೊಂದಿಗೆ ಮೃತರ ಸಂಖ್ಯೆಯೂ ಹೆಚ್ಚುತ್ತಿದ್ದು, ಮಂಗಳವಾರ ಒಂದೇ ದಿನ 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ ನಂತರ ದಿನದ ಸಾವಿನ ಸಂಖ್ಯೆ 20 ದಾಟಿದೆ. ನವೆಂಬರ್ ಎರಡನೇ ವಾರದಲ್ಲಿ 23 ಮಂದಿ ಮೃತಪಟ್ಟಿದ್ದರು. ಇದರೊಂದಿಗೆ ಮೃತರ ಸಂಖ್ಯೆ 12,541 ತಲುಪಿದೆ.

    ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 11 ಮಂದಿ, ಮೈಸೂರಿನಲ್ಲಿ ಮೂವರು, ಬೆಂಗಳೂರು ಗ್ರಾಮಾಂತರ ಇಬ್ಬರು, ಬೀದರ್, ಚಿಕ್ಕಮಗಳೂರು, ಹಾಸನ, ಕಲಬುರಗಿ, ಮಂಡ್ಯದಲ್ಲಿ ತಲಾ ಒಬ್ಬರಂತೆ 21 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

    ಹೊಸದಾಗಿ 2,975 ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 9.92 ಲಕ್ಷ ಮೀರಿದೆ. ಇದರೊಂದಿಗೆ ಸಕ್ರಿಯೆ ಪ್ರಕರಣಗಳ ಸಂಖ್ಯೆ 25,541ಕ್ಕೆ ಏರಿಕೆಯಾಗಿದೆ. ಇವರಲ್ಲಿ 240 ಸೋಂಕಿತರು ಗಂಭೀರ ಸಮಸ್ಯೆಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,262 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.54 ಲಕ್ಷ ದಾಟಿದೆ.

    ಇದನ್ನೂ ಓದಿ: ಕರ್ತವ್ಯಕ್ಕೆ ಅಡ್ಡಿಪಡಿಸಿದವರಿಗೆ ಶಿಕ್ಷೆ ವಿಧಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯ

    1.06 ಲಕ್ಷ ಪರೀಕ್ಷೆ: ರಾಜ್ಯದಲ್ಲಿ ಎರಡನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಮಂಗಳವಾರ ಒಂದೇ ದಿನ 7,578 ರಾಪಿಡ್ ಆಂಟಿಜನ್ ಟೆಸ್ಟ್ ಹಾಗೂ 99,339 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 1.06 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೂ 2.13 ಕೋಟಿ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ.

    ರಾಷ್ಟ್ರಪತಿ ರಾಮನಾಥ ಕೋವಿಂದ್ ಹೃದಯದ ಶಸ್ತ್ರಚಿಕಿತ್ಸೆ ಯಶಸ್ವಿ

    ‘ನಶಾಮುಕ್ತ ಭಾರತ’ ಅಭಿಯಾನ; ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ನಡೆಯಲಿದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts