ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಚಕಮಕಿ.. ಅವಿತಿದ್ದ ಉಗ್ರರಿಂದ ದಾಳಿ, ಯೋಧರಿಂದ ಪ್ರತಿದಾಳಿ..

army
Published on

ಶ್ರೀನಗರ: ಪುಲ್ವಾಮಾ ಮತ್ತೆ ಸುದ್ದಿಯಲ್ಲಿದೆ. ಕಾರಣ ಮತ್ತದೇ ಉಗ್ರವಾದ. ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಉಗ್ರರು ನುಸುಳಿರುವ ಸುಳಿವಿನ ಮೇರೆಗೆ ಯೋಧರು ಸಂಬೂರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಗೆ ಇಳಿದಾಗ, ಅವಿತಿದ್ದ ಉಗ್ರರು ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಯೋಧರೂ ದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net