ಮತ್ತೆ ನರೇಂದ್ರ ಮೋದಿ  ಪ್ರಧಾನಿ ಆಗ್ತಾರೆ

ಬೆಳಗಾವಿ: ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗ್ತಾರೆ. 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ ಹರ್ಷವರ್ಧನ ಹೇಳಿದ್ದಾರೆ.

ಇಡೀ ಪ್ರಪಂಚದಲ್ಲಿ 20 ದೇಶಗಳಲ್ಲಿ ಚುನಾವಣೆ ನಡೆಯುತ್ತಿವೆ. ಆದರೆ ಇಡೀ ಪ್ರಪಂಚದವೇ ಭಾರತದ ಚುನಾವಣೆಯತ್ತ ಮುಖ ಮಾಡಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದರು.

ಕಾಂಗ್ರೆಸ್ಸಿನ ರಾಹುಲ್ ಗಾಂಧಿ, ರಫೇಲ್, ಡೈರಿ ವಿಚಾರಗಳು ಅಪ್ರಸ್ತುತ. ಇಂತಹ ಸಂದರ್ಭದಲ್ಲಿ ಆ ವಿಚಾರಗಳ ಬಗ್ಗೆ ಮಾತನಾಡಿ ಸಮಯ ಹಾಳು ಮಾಡುವುದಿಲ್ಲ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧೆ ವಿಚಾರ ಊಹಾಪೋಹ. ಇಂತಹ ಊಹಾಪೋಹಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಪ್ರಧಾನಿ ಮೋದಿ ಸರ್ಕಾರವು ಐದು ವರ್ಷ ಒಳ್ಳೆಯ ಆಡಳಿತ ನೀಡಿದೆ. ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ನೀಡಿದೆ ಎಂದರು.

ಸುರೇಶ ಅಂಗಡಿ ಗುಣಗಾನ ಮಾಡಿದ ಕೇಂದ್ರ ಸಚಿವ ಹರ್ಷವರ್ಧನ, ಸುರೇಶ ಅಂಗಡಿ ಪ್ರಾಮಾಣಿಕ ನಾಯಕ. ದೇಶಕ್ಕಾಗಿ, ಕರ್ನಾಟಕ ರಾಜ್ಯಕ್ಕಾಗಿ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಸಂಸದ ಅಂಗಡಿ ಒಳ್ಳೆಯ ಕೆಲಸಗಳನ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *