More

    ವಯೋಮಿತಿ ಆಧಾರದಲ್ಲಿ ಮುಂಬಡ್ತಿಗೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

    ಶಿವಮೊಗ್ಗ: ವಯೋಮಿತಿ ಆಧಾರದಲ್ಲಿ ಮುಂಬಡ್ತಿ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಶಾಖೆ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    2022ರ ಡಿ.3ರಂದು ಇಲಾಖೆ ನಿರ್ದೇಶನದ ಮೇರೆಗೆ ಮಾರ್ಗಸೂಚಿಗಳನ್ನು ಪರಿಷ್ಕೃತಗೊಳಿಸಲಾಗಿದೆ. ಹೀಗಾಗಿ ಹಳೆಯ ಮಾರ್ಗಸೂಚಿ ಪ್ರಕಾರ ನೇಮಕವಾದ ಸಾವಿರಾರು ಅಂಗನವಾಡಿ ಸಹಾಯಕಿಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಪರಿಷ್ಕೃತ ಆದೇಶವನ್ನು ತಿದ್ದುಪಡಿ ಮಾಡಬೇಕು ಮತ್ತು ವಯೋಮಿತಿ ಆಧಾರದಲ್ಲಿ ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
    2022ರ ಆ.1ರಂದು ಕೇಂದ್ರ ಸರ್ಕಾರದ ಸಕ್ಷಮ ಅಂಗನವಾಡಿ ಕೇಂದ್ರಗಳ ಮಾರ್ಗಸೂಚಿಯನ್ನು ನೀಡದೆ ದೇಶದ ಯಾವುದೇ ರಾಜ್ಯಗಳ ಅಂಗನವಾಡಿಗಳಲ್ಲೂ ಜಾರಿಗೆ ತಂದಿಲ್ಲ. ಆದರೆ ಕರ್ನಾಟಕ ಸರ್ಕಾರ ಮಾತ್ರ ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಜಾರಿಗೆ ತರಲು ಮುಂದಾಗಿದೆ ಎಂದು ಕಿಡಿಕಾರಿದರು.
    ಬೆಳಗಾವಿ, ಹಾಸನ, ತುಮಕೂರು, ಕೋಲಾರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅರ್ಹತೆ ಇರುವ ಸಹಾಯಕಿಯರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮುಂಬಡ್ತಿ ಕೊಟ್ಟಿಲ್ಲ. ಆದ್ದರಿಂದ ಆ ಆದೇಶವನ್ನು ಬದಲಿಸಿ ವಯೋಮಿತಿ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
    ಸಂಘದ ಜಿಲ್ಲಾಧ್ಯಕ್ಷೆ ಶೈಲಜಾ, ಪ್ರಧಾನ ಕಾರ್ಯದರ್ಶಿ ಎಚ್.ಜಯಲಕ್ಷ್ಮೀ, ತೀರ್ಥಹಳ್ಳಿ ತಾಲೂಕು ಘಟಕದ ಅಧ್ಯಕ್ಷೆ ಆರ್.ಮಂಜುಳಾ, ತಾಲೂಕು ಕಾರ್ಯದರ್ಶಿ ಎಚ್.ಎಸ್.ಉಮ್ಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts