

Education | ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು(16) ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿ ಬಗ್ಗೆ ಮಧು ಬಂಗಾರಪ್ಪ ಮಾತನಾಡಿದ್ದು, ಈ ವರ್ಷ ದಾಖಲಾತಿಗೆ 5 ವರ್ಷ 5 ತಿಂಗಳಾಗಿದ್ದರೂ ಸಹ ಅವಕಾಶ ಕಲ್ಪಿಸಲಾಗುತ್ತದೆ ಎಂದು ಘೋಷಣೆ ಹೊರಡಿಸಿದ್ದಾರೆ. ಪೋಷಕರ ಬೇಡಿಕೆ ಹೆಚ್ಚಾಗಿದ್ದ ಕಾರಣ ಈ ವರ್ಷ ಮಾತ್ರ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಆದರೆ ಮುಂದಿನ ವರ್ಷದಿಂದ ಹಿಂದಿನ ನಿಯಮದಂತೆ 6 ವರ್ಷವೇ ಇರಲಿದೆ ಎಂದಿದ್ದಾರೆ.
ವಯೋಮಿತಿ ವಿಚಾರದಲ್ಲಿ ಪೋಷಕರು ಗೊಂದಲದಲ್ಲಿದ್ದಾರೆ. ದೇಶದಲ್ಲಿ ಎಲ್ಲಾ ಕಡೆ ಒಂದನೇ ತರಗತಿ ಸೇರ್ಪಡೆಗೆ ಆರು ವರ್ಷ ವಯೋಮಿತಿ ಇದೆ. ಎರಡು ತಿಂಗಳು ಮಾತ್ರ ಸಡಿಲಿಕೆ ಮಾಡಬಹುದು. ನಮ್ಮದು ಎಸ್ಇಪಿ ಇರುವುದರಿಂದ ಅವರ ಬಳಿ ಕೇಳಿದಾಗ, ಮಕ್ಕಳು ಕಡಿಮೆ ವಯಸ್ಸಿನಲ್ಲೇ ಸೇರಿಕೊಳ್ಳುತ್ತಿದ್ದಾರೆ ಎಂದಿದ್ದರು, ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
(ಏಜೆನ್ಸೀಸ್)
ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಹೊರಡಿಸಿದ್ದಾರೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.