More

    ಜು.17ರಿಂದ ಉಡುಪಿಯಲ್ಲಿ ಅಗ್ನಿಪಥ್‌ ನೇಮಕಾತಿ ರ‍್ಯಾಲಿ; 6,800ಕ್ಕೂ ಅಧಿಕ ಮಂದಿ ನೋಂದಣಿ

    ಉಡುಪಿ: ಭಾರತೀಯ ಸೇನೆಯ ಅಗ್ನಿ ಪಥ್‌ ಸೇನಾ ನೇಮಕಾತಿ ರ‍್ಯಾಲಿ ಜು.17ರಿಂದ 25ರ ತನಕ ಇಲ್ಲಿನ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ತಿಳಿಸಿದರು.

    ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ರ‍್ಯಾಲಿಯ ಪೂರ್ವಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವೀಣಾ ಅವರು ಇಲ್ಲಿಯವರೆಗೆ 11 ಜಿಲ್ಲೆಗಳಿಂದ 6,800 ಅಧಿಕ ಮಂದಿ ಯುವಕರು ಹೆಸರು ನೋಂದಣಿ ಮಾಡಿದ್ದಾರೆ ಎಂದರು.

    ಆನ್‌ಲೈನ್‌ ಮೂಲಕ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಈಗಾಗಲೇ ಹೆಸರು ನೊಂದಾಯಿಸಿಕೊಂಡಿದ್ದಾರೆ. ಪ್ರತಿದಿನ 1000 ಮಂದಿ ನೇಮಕಾತಿ ಪರೀಕ್ಷೆಗೆ ಆಗಮಿಸಲಿದ್ದು, ಕುಡಿಯುವ ನೀರು, ಮೊಬೈಲ್‌ ಟಾಯ್ಲೆಟ್‌ ಮತ್ತಿತರ ಮೂಲಭೂತ ಸೌಕರ್ಯ ಒದಗಿಸಿ, ಕ್ರೀಡಾಂಗಣದ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕ್ರೀಡಾಂಗಣ ಸುತ್ತಮುತ್ತ ಅಗತ್ಯ ಭದ್ರತಾ ವ್ಯವಸ್ಥೆ ಒದಗಿಸುವಂತೆ ಪೊಲೀಸ್‌ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

    ಸಭೆಯಲ್ಲಿ ಡಿವೈಎಸ್ಪಿ ಸಿದ್ಧಲಿಂಗಪ್ಪ, ನಗರಸಭೆಯ ಪೌರಾಯುಕ್ತ ರಾಯಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್‌ ಕುಮಾರ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts