

ಕೋಟ: ಯುವ ಸಮೂಹ ಕೃಷಿ ಕ್ಷೇತ್ರಕ್ಕೆ ಮುನ್ನಗ್ಗಬೇಕಿದೆ. ಆ ಮೂಲಕ ಕೃಷಿ ಅವಲಂಬಿತ ಭಾರತ ಸದೃಢವಾಗಿಸಲು ಸಾಧ್ಯ. ರೈತ ಬೆಳೆದ ಬೆಳೆಗೆ ದರ ನಿಗದಿಪಡಿಸುವಂತ್ತಾಗಬೇಕು ಆಗ ಮಾತ್ರ ರೈತ ಕಾಯಕ ನೈಜವಾಗಿ ಉಳಿಯಲು ಸಾಧ್ಯ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹೇಳಿದರು.
ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಎಸ್ಸಿಐ ಕೋಟ ಲಿಜನ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಸಾಧಕ ರೈತರನ್ನು ಗುರುತಿಸುವ 38ನೇ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಕೃಷಿಕ ಸುಧಾಕರ ಶೆಟ್ಟಿ ಅವರನ್ನು ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಸದಾನಂದ ಪೂಜಾರಿ ಗಿಳಿಯಾರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಕೃಷಿಕರಾದ ಭಾಸ್ಕರ್ ಶೆಟ್ಟಿ ಮಣೂರು, ರೈತ ಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಕೋಟ ಗ್ರಾಪಂ ಸದಸ್ಯೆ ವನೀತ ಶ್ರೀಧರ ಆಚಾರ್, ಗೆಳೆಯರ ಬಳಗ ಕಾರ್ಕಡ ಸದಸ್ಯ ಶೇಖರ್ ಮುಡೋಳಿ, ಎಸ್.ಸಿ.ಐ ಕೋಟ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಇದ್ದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲ ಸಂಚಾಲಕಿ ಸುಜಾತ ಎಂ.ಬಾಯರಿ ಸನ್ಮಾನ ಪತ್ರವಾಚಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.