25.9 C
Bengaluru
Wednesday, January 22, 2020

ಮಳೆಯಿಂದ ಶೇಂಗಾ ಬಿತ್ತನೆ ಕಾರ್ಯಕ್ಕೆ ಹಿನ್ನಡೆ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಕೋಟ: ಕೋಟ ಪ್ರದೇಶದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಶೇಂಗಾ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಸಾಮಾನ್ಯವಾಗಿ ಮಳೆ ಪ್ರಮಾಣ ನೋಡಿ ಶೇಂಗಾ ಬಿತ್ತನೆ ಮಾಡಲಾಗುತ್ತದೆ. ಅಕ್ಟೋಬರ್ ಕೊನೇ ಇಲ್ಲವೆ ನವೆಂಬರ್‌ನಲ್ಲಿ ಬಿತ್ತನೆ ಕಾರ್ಯ ನಡೆಯುತ್ತದೆ. ಆದರೆ ಈ ಬಾರಿ ಡಿಸೆಂಬರ್ ಬಂದರೂ ಬಿತ್ತನೆ ಆಗಿಲ್ಲ. ಕೋಟ ಪರಿಸರದಲ್ಲಿ ಡಿಸೆಂಬರ್‌ನಲ್ಲೂ ಅಕಾಲಿಕ ಮಳೆಯಾಗುತ್ತಿರುವುದು ಇದಕ್ಕೆ ಕಾರಣ.
ಕಳೆದ ವರ್ಷ ನವೆಂಬರ್‌ನಲ್ಲಿ ಶೇಂಗಾ ಬಿತ್ತನೆ ಕಾರ್ಯ ಕೈಗೊಳ್ಳಲಾಗಿತ್ತು. ಆದರೆ, ಅಕ್ಟೋಬರ್ ಬಳಿಕ ಕಣ್ಮರೆಯಾಗಿದ್ದ ಮಳೆ ಮತ್ತೆ ಸುಳಿಯದ ಪರಿಣಾಮ ಭೂಮಿಯಲ್ಲಿ ಉಷ್ಣಾಂಶ ಏರಿಕೆಗೊಂಡು ಶೇಂಗಾ ಬೆಳೆ ಸಂಪೂರ್ಣ ಕೈಕೊಟ್ಟಿತ್ತು. ಈ ಬಾರಿ ಡಿಸೆಂಬರ್ ಬಂದರೂ ಮಳೆ ನಿಂತಿಲ್ಲ. ಮಳೆ ಕಡಿಮೆಯಾದ ಬಳಿಕ ಡಿಸೆಂಬರ್ ಕೊನೇ ವೇಳೆಗೆ ಬಿತ್ತನೆ ಕಾರ್ಯ ನಡೆಯುವ ಸಾಧ್ಯತೆಗಳಿವೆ.

ಗೊಬ್ಬರ, ಶೇಂಗಾ ಬೀಜ ದಾಸ್ತಾನು: ಕಳೆದ ಬಾರಿ ಇಷ್ಟರೊಳಗೆ ಶೇಂಗಾ ಬೀಜ ಖರೀದಿಯಾಗಿ ಬಿತ್ತನೆ ಕಾರ್ಯ ಮುಗಿಸಿದ್ದ ರೈತ ಈ ಬಾರಿ ಬಿತ್ತನೆ ಬೀಜ ಖರೀದಿಗೇ ಮನ ಮಾಡಿಲ್ಲ. ಕೃಷಿ ಕೇಂದ್ರದಲ್ಲಿ ಶೇಂಗಾ ಬೀಜ ಹಾಗೂ ಗೊಬ್ಬರ ದಾಸ್ತಾನು ಸಾಕಷ್ಟಿದ್ದು, ಮಳೆ ಕಡಿಮೆಯಾಗುವುದನ್ನೇ ರೈತ ಎದುರು ನೋಡುತ್ತಿದ್ದಾನೆ.
ಯಂತ್ರಗಳ ಮೊರೆ: ಭತ್ತ ಕಟಾವಿನ ಬಳಿಕ ಪ್ರಸಕ್ತ ಶೇಂಗಾ ಬೆಳೆಯಲು ಕೃಷಿ ಭೂಮಿ ಹದ ಮಾಡುವ ಕಾರ್ಯದಲ್ಲಿ ರೈತರು ತಲ್ಲೀನರಾಗಿದ್ದಾರೆ. ಬಾಡಿಗೆ ಟ್ರಾೃಕ್ಟರ್ ಹಾಗೂ ಟಿಲ್ಲರ್‌ಗಳಿಗೆ ರೈತ ಮೊರೆ ಹೋಗಿದ್ದು. ಕೋಟ ಪರಿಸರದ ಬಹುತೇಕ ಗದ್ದೆಗಳಲ್ಲಿ ಉಳುಮೆ ಕಾರ್ಯ ಭರದಿಂದ ನಡೆಯುತ್ತಿದೆ.

ಕೋಟ ಹೋಬಳಿಯಲ್ಲಿ ಒಟ್ಟು 416 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಶೇಂಗಾ ಬೆಳೆಯುವ ಗುರಿಯಿದ್ದು, ಇದಕ್ಕೆ ಪೂರಕವಾಗಿ 75 ಕ್ವಿಂಟಾಲ್ ಶೇಂಗಾ ಬೀಜ ದಾಸ್ತಾನು ಇಡಲಾಗಿದೆ. ರೈತರಿಗೆ ಅಗತ್ಯವಿದ್ದಷ್ಟು ಬೀಜ ಪೂರೈಸಲಾಗುತ್ತದೆ. ಸಾವಯವ ಗೊಬ್ಬರ, ಜಿಪ್ಸಂ, ಸುಣ್ಣ ಇನ್ನಿತರ ರಾಸಾಯನಿಕ ಔಷಧಗಳೂ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ.
ಸುಪ್ರಭಾ, ಕೋಟ ರೈತಸಂಪರ್ಕ ಕೇಂದ್ರ ಅಧಿಕಾರಿ

ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಶೇಂಗಾ ಬಿತ್ತನೆ ಕಾರ್ಯ ಹಿನ್ನಡೆ ಅನುಭವಿಸಿದೆ. ಅಕಾಲಿಕ ಮಳೆಯಿಂದ ಬಿತ್ತನೆ ಕಾರ್ಯ ಇನ್ನಷ್ಟು ಮುಂದಕ್ಕೆ ಹೋಗುವ ಸಾಧ್ಯತೆಗಳಿವೆ. ಭೂಮಿಯಲ್ಲಿ ಮಿತಿಗಿಂತ ಹೆಚ್ಚು ತಂಪಿನ ವಾತಾವರಣ ಇದ್ದರೆ ಶೇಂಗಾ ಬೀಜ ಬಿತ್ತನೆ ಮಾಡಿದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ.
ಎಂ.ಶಿವ ಪೂಜಾರಿ, ಮಣೂರು ಪಡುಕರೆ ಕೃಷಿಕ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...