More

    ಕೃಷಿ ಉತ್ಪನ್ನಕ್ಕೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ: ಗಂಗಾವತಿಯಲ್ಲಿ ಕಿಸಾನ್ ಸಭಾ ತಾಲೂಕು ಸಮಿತಿ ಪ್ರತಿಭಟನೆ

    ಗಂಗಾವತಿ: ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಯು.ನಾಗರಾಜ್, ಕೃಷಿ ಅಧಿಕಾರಿ ಮತ್ತು ತಾಪಂ ಇಒಗೆ ಮನವಿ ಸಲ್ಲಿಸಿದರು.

    ತಾಲೂಕು ಕಾರ್ಯದರ್ಶಿ ಎ.ಎಲ್. ತಿಮ್ಮಣ್ಣ ಮಾತನಾಡಿ, ಜಿಲ್ಲಾದ್ಯಂತ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಅತಿಹೆಚ್ಚು ಭತ್ತ ಬೆಳೆದ ರೈತರು ಬೆಲೆಯಿಲ್ಲದೆ ತೊಂದರೆಗೆ ಒಳಗಾಗಿದ್ದು, ವೈಜ್ಞಾನಿಕ ಬೆಲೆ ನಿಗದಿಪಡಿಸುವಲ್ಲಿ ವಿಲವಾಗಿದೆ. ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದು, ಕೃಷಿಕರಿಗೆ ಅನ್ಯಾಯವಾಗುತ್ತಿದೆ. ಬಿತ್ತನೆ ಬೀಜ, ರಸಗೊಬ್ಬರ ಸಕಾಲಕ್ಕೆ ವಿತರಿಸಬೇಕು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ೋಷಿಸಬೇಕು. ನರೇಗಾ ಯೋಜನೆಯಡಿ ಕೈಗೆತ್ತಿಕೊಂಡ ಕೆರೆ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕವಾಗಿದ್ದು, ತೆಗೆದ ಮಣ್ಣನ್ನು ಬೇರೆಡೆ ಸಾಗಿಸಬೇಕು. 150 ಮಾನವ ದಿನ ಸೃಷ್ಟಿಸಿ ಕೂಲಿ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

    ಪದಾಧಿಕಾರಿಗಳಾದ ಎ.ಹುಲುಗಪ್ಪ, ಶೇಖಮ್ಮ, ಶೇಷಪ್ಪ, ಎಸ್.ಕನಕರಾಯ, ಗಂಗಮ್ಮ, ಮರಿಯಮ್ಮ, ಮುತ್ತಣ್ಣ, ಕರಿಯಪ್ಪ, ಯಮನೂರ, ಅಂಬಣ್ಣ, ಚಂದ್ರಪ್ಪ ನಾಯಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts