More

    ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ನಿರೀಕ್ಷೆ: ಬೆಕ್ಕಿನ ಕಲ್ಮಠ ಶ್ರೀ

    ಶಿವಮೊಗ್ಗ: ಪ್ರಸ್ತುತ ಆಹಾರ ಧಾನ್ಯಗಳನ್ನು ಬೆಳೆಯದಂತಹ ಸ್ಥಿತಿ ಎಲ್ಲೆಡೆ ನಿರ್ಮಾಣವಾಗಿದ್ದು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ನಿರೀಕ್ಷೆ ಮಾಡಬೇಕಿದೆ ಎಂದು ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ಹೇಳಿದರು.
    ನಗರದ ನವುಲೆ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಶನಿವಾರ ಸೆಕೆಂಡರಿ ಕೃಷಿ ಮತ್ತು ಮೌಲ್ಯವರ್ಧನೆ ಕುರಿತು ತಾಂತ್ರಿಕ ಸಮಾವೇಶ ಉದ್ಘಾಟಿಸಿ ಅವರು ಆಶೀವರ್ಚನ ನೀಡಿದರು.
    ಮಳೆಗಾದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಅತ್ಯಧಿಕ ಮಳೆ ಬೀಳುತ್ತದೆ. ಆದರೆ ಬೇಸಿಗೆ ಆರಂಭಗೊಳ್ಳುತ್ತಿದ್ದಂತೆ ನೀರಿಗೆ ಹಾಹಾಕಾರ ಸೃಷ್ಟಿಯಾಗುತ್ತಿದೆ. ಕುಡಿಯುವ ನೀರು ಕೂಡ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಆ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಅಧ್ಯಯನಗಳು ನಡೆಯಬೇಕಿದೆ ಎಂದರು.
    ಸಮಾಜದಲ್ಲಿ ಒಂದೆಡೆ ಅತ್ಯಂತ ನಿರ್ಲಕ್ಷೃಕ್ಕೆ ಒಳಗಾದ ಮತ್ತು ಮತ್ತೊಂದೆಡೆ ಹಾಡಿ ಹೊಗಳಿ ಪ್ರಶಂಸೆ ವ್ಯಕ್ತವಾಗುತ್ತಿರುವುದು ಕೃಷಿ ಕ್ಷೇತ್ರ ಮತ್ತು ಕೃಷಿಕ ಎಂಬುದು ಸೋಜಿಗದ ಸಂಗತಿ. ಪ್ರಸ್ತುತ ಕೃಷಿ ಎಂಬುದು ಹಸಿ, ಮಸಿ, ಕೃಷಿ ಎಂಬಂತಾಗಿದೆ. ಆಹಾರ ಧಾನ್ಯಗಳನ್ನು ಬಿಟ್ಟು ವಾಣಿಜ್ಯ ಬೆಳೆಗಳತ್ತ ರೈತ ಮುಖ ಮಾಡುತ್ತಿದ್ದಾನೆ. ಇದು ಆತಂಕಕಾರಿ ಬೆಳೆವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
    ಒಂದು ಕಾಲದಲ್ಲಿ ಶಿವಮೊಗ್ಗ ಜಿಲ್ಲೆ ಭತ್ತದ ಕಣಜ ಆಗಿತ್ತು. ಜಲಾಶಯಗಳು ನಿರ್ಮಾಣಗೊಂಡ ಬಳಿಕ ಕಬ್ಬು ಬೆಳೆಯಲಾರಂಭಿಸಿದರು. ಆನಂತರ ಅಡಕೆ ಸೇರಿದಂತೆ ವಾಣಿಜ್ಯ ಬೆಳೆಗಳನ್ನೇ ಹೆಚ್ಚಾಗಿ ರೈತರು ಅವಲಂಬಿಸುವಂತಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರಿದರೆ ತುತ್ತು ಅನ್ನಕ್ಕೂ ಪರದಾಟ ನಡೆಸುವ ಸಂದರ್ಭ ದೂರವಿಲ್ಲ. ಆ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ರೈತರಿಗೆ ಹತ್ತಿರವಾಗಬೇಕಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts