ಕೋಟ: ಕೃಷಿ ಕಾಯಕ ಕಡೆಗಣಿಸುವ ಮನಸ್ಥಿತಿಯಿಂದ ಹೊರಬರಬೇಕು ಎಂದು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಹೇಳಿದರು.
ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಷನ್ ಮಣೂರು, ರೈತ ಧ್ವನಿ ಸಂಘ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ, ರೈತರೆಡೆಗೆ ನಮ್ಮ ನಡಿಗೆ 43ನೇ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾಬು ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.
ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪ್ರಮುಖರಾದ ತಿಮ್ಮ ಕಾಂಚನ್, ಉದ್ಯಮಿ ಹರೀಶ್ ದೇವಾಡಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರಿದ್ದರು. ಟಿ.ಮಂಜುನಾಥ ಗಿಳಿಯಾರು ಸನ್ಮಾನಿತರನ್ನು ಪರಿಚಯಿಸಿದರು. ಮಹೇಶ್ ಬೆಳಗಾವಿ ಸನ್ಮಾನಪತ್ರ ಯಾಚಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಮಹಿಳಾ ಮಂಡಲ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು.