More

    ಕೃಷಿ ಕಾಯ್ದೆ ವಿರೋಧಿಸಿ ಸಂಚಾರ ತಡೆ

    ರಾಯಚೂರು: ರೈತ, ಕಾರ್ಮಿಕ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಕರೆ ನೀಡಿದ್ದ ಸಂಚಾರ ತಡೆಗೆ ಬೆಂಬಲಿಸಿ ಸ್ಥಳೀಯ ಅಸ್ಕಿಹಾಳ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಯುಕ್ತ ಹೋರಾಟ ಕರ್ನಾಟಕದಿಂದ ಸಂಚಾರ ತಡೆ ನಡೆಸಲಾಯಿತು.

    ಸುಮಾರು ಎರಡು ಗಂಟೆಗಳ ಕಾಲ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಕಾರ್ಮಿಕ ಸಂಹಿತೆಗಳ ತಿದ್ದುಪಡಿಯನ್ನು ಹಿಂಪಡೆಯಬೇಕು. ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ನೀತಿಗಳನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಸಂಚಾರ ತಡೆಯಿಂದಾಗಿ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಯಿತು. ಬಸವೇಶ್ವರ ವೃತ್ತದಿಂದ ಅಸ್ಕಿಹಾಳಗೆ ಹೋಗುವ ಹಾಗೂ ಬೈಪಾಸ್‌ನಿಂದ ಅಸ್ಕಿಹಾಳಗೆ ಹೋಗುವ ರಸ್ತೆಗಳನ್ನು ಪೊಲೀಸ್‌ರು ಬಂದ್ ಮಾಡಿದ್ದರಿಂದ ವಾಹನ ಸವಾರರು ಸುತ್ತುಬಳಸಿ ಸಂಚರಿಸುವಂತಾಯಿತು. ಹೋರಾಟದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts