More

    ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

    ವಿಜಯಪುರ: ಕೃಷಿ ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಮತ್ತು ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
    ಮುಖಂಡ ಅಬ್ದುಲ್‌ಹಮೀದ ಮುಶ್ರೀಫ್ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳು ದೇಶದ ರೈತಾಪಿ ವರ್ಗಕ್ಕೆ ಮಾರಕವಾಗಿವೆ. ಕಾಯ್ದೆ ಹಿಂಪಡೆಯಲು ದೆಹಲಿಯಲ್ಲಿ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಯಾವುದೇ ರೀತಿಯಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕೀರ ಸನದಿ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಕರಾಳ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ದೇಶದ ಜಿಡಿಪಿ ಸಂಪೂರ್ಣ ರೈತರ ಮೇಲೆ ನಿಂತಿದ್ದು, ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಚುನಾವಣೆ ವೇಳೆಯಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಮುಖಂಡರಾದ ವೈಜನಾಥ ಕರ್ಪೂರಮಠ, ಸುನೀತಾ ಐಹೊಳ್ಳಿ, ಸುರೇಶ ಘೊಣಸಗಿ, ವಿದ್ಯಾರಾಣಿ ತುಂಗಳ, ಶ್ರೀಕಾಂತ ಛಾಯಾಗೋಳ, ವಿದ್ಯಾವತಿ ಅಂಕಲಗಿ, ಜಮೀರಅಹ್ಮದ್ ಬಕ್ಷಿ, ಆರತಿ ಶಹಾಪುರ, ಶಬ್ಬೀರ್ ಜಾಗೀರದಾರ, ರುಕ್ಮಿಣಿ ಲಮಾಣಿ, ಚಾಂದಸಾಬ ಗಡಗಲಾವ, ಮಲ್ಲನಗೌಡ ಬಿರಾದಾರ, ಶಹಜಾನ ದುಂಡಸಿ, ವಿನೋದ ವ್ಯಾಸ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts