

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮಹಿಳಾ ಕೃಷಿ ಅಧಿಕಾರಿಯೊಬ್ಬರು ಗುರುವಾರ ಮಂಜಿರಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಧಿಕಾರಿಯನ್ನು ಅರುಣಾ ಎಂದು ಗುರುತಿಸಲಾಗಿದೆ. ಸಂಗಾರೆಡ್ಡಿಯ ರೈತರ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಮನೊರ್ ಮಂಡಲದಲ್ಲಿ ಮಂಜಿರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮೇಲೆ ತಮ್ಮ ಕಾರು ಪಾರ್ಕ್ ಮಾಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಪತ್ತೆಯಾಗಿರುವ ಅರುಣಾರಿಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಅಧಿಕಾರಿಯ ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀರು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್)