ಉಜ್ಜಿನಿ: ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆಯಲ್ಲಿ ಕೃಷಿ ಸಂಶೋಧನೆ ಮತ್ತು ಮತ್ತು ವಿಜ್ಞಾನ ಕೇಂದ್ರ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.
ಉಜ್ಜಿನಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೂ ಮುನ್ನವೇ ಕೃಷಿ ಸಂಶೋಧನೆ ಕೇಂದ್ರಕ್ಕೆ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಕೇಂದ್ರ ಆರಂಭಿಸಲು 50 ಎಕರೆ ಭೂಮಿ ಅಗತ್ಯವಿದ್ದು, ರಾಯಚೂರು ಕೃಷಿ ವಿವಿಗೆ ಹಸ್ತಾಂತರಿಸಬೇಕಾಗಿದೆ. ಸರ್ಕಾರದ ಆದೇಶ ಪತ್ರ ಡಿಸಿಗೆ ಬಂದ ಕೂಡಲೇ ಭೂಮಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಉಜ್ಜಿನಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ತೆರವುಗೊಳಿಸಿ ಕೆಕೆಆರ್‌ಡಿಬಿಯಡಿ 4.77 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಂಕದಲ್ಲು ಗ್ರಾಮದಲ್ಲಿ ಸಿಸಿ ರಸ್ತೆ, ಕೂಡ್ಲಿಗಿ-ಉಜ್ಜಿನಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.