ಹೆಬ್ರಿ: ಉಡುಪಿ-ಹೆಬ್ರಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 1ನೇ ತಿರುವು ಚೆಕ್‌ಪೋಸ್ಟ್ ಬಳಿ ಮಂಗಳವಾರ ಮರ ಬಿದ್ದು ರಸ್ತೆಯಂಚಿನ ಮಣ್ಣು ಕುಸಿದು ಕೆಲವು ನಿಮಿಷಗಳಷ್ಟು ಹೊತ್ತು ರಸ್ತೆ ಸಂಚಾರ ಸಮಸ್ಯೆಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಮಣ್ಣು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಪ್ರಯಾಣಿಕರು ಆತಂಕ ಪಡುವ ಅಗತ್ಯ ಇಲ್ಲ. ತಕ್ಷಣವೇ ಮಣ್ಣು ತೆರವುಗೊಳಿಸಲಾಗಿದೆ. ಎಂದಿನಂತೆ ವಾಹನ ಸಂಚಾರ ಸುಗಮವಾಗಿ ಸಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.