ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಬಿಗಿ-ಶ್ರೀನಗರದಲ್ಲಿ ಕರ್ಫ್ಯೂ ಘೋಷಣೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಶ್ರೀನಗರದಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಸೋಮವಾರದಿಂದಲೇ ಇದು ಜಾರಿಗೆ ಬಂದಿದ್ದು, ನಾಳೆ ರಾತ್ರಿವರೆಗೂ ಮುಂದುವರಿಯಲಿದೆ. ಇದಕ್ಕೂ ಮುನ್ನ ಪರಿಸ್ಥಿತಿ ಅವಲೋಕನಕ್ಕಾಗಿ ಸೇನೆಯ ಕೋರ್​ಗ್ರೂಪ್​ ಮೀಟಿಂಗ್ ನಡೆದಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿ ವಿಶೇಷ ಸ್ಥಾನಮಾನ ಒದಗಿಸಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ನಾಳೆಗೆ ಒಂದು ವರ್ಷ. ಈ ಸಂದರ್ಭದಲ್ಲಿ ಅಹಿತಕರ ಘಟನೆಗಳು ಆಗದಿರುವಂತೆ ಮುಂಜಾಗ್ರತಾ ಕ್ರಮಗಳನ್ನು ಸ್ಥಳೀಯಾಡಳಿತ ತೆಗೆದುಕೊಂಡಿದೆ. ಆಗಸ್ಟ್ 3ರ ಸಂಜೆಯಿಂದ ಶ್ರೀನಗರದಲ್ಲಿ ಕರ್ಫ್ಯೂ ಚಾಲ್ತಿಯಲ್ಲಿದೆ. ಉಳಿದೆಡೆ ಇಂದು ಮತ್ತು … Continue reading ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಬಿಗಿ-ಶ್ರೀನಗರದಲ್ಲಿ ಕರ್ಫ್ಯೂ ಘೋಷಣೆ