More

    ಸಾಮಾಜಿಕ ಕಾರ್ಯಗಳಲ್ಲಿ ಸಹಕಾರಿ ಬ್ಯಾಂಕ್ ಮುಂದೆ

    ಕುಮಟಾ: ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದರೂ, ಸಹಕಾರಿ ಕ್ಷೇತ್ರದ ಮೂಲಕ ಜನರಿಗೆ ಪ್ರಾಮಾಣಿಕವಾಗಿ ಸಹಾಯ ಆಗುತ್ತಿದೆ. ಸಹಕಾರಿ ಬ್ಯಾಂಕ್​ಗಳು ಸಾಮಾಜಿಕ ಸೇವಾ ಕಾರ್ಯಗಳಲ್ಲೂ ಮುಂಚೂಣಿಗೆ ಬರುತ್ತಿದೆ ಎಂದು ಸಾಹಿತಿ ಶ್ರೀಪಾದ ಶೆಟ್ಟಿ ಹೇಳಿದರು.

    ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕ್​ಗಳ ಆಶ್ರಯದಲ್ಲಿ ಜಿಲ್ಲೆಯ ಪಟ್ಟಣದ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ನಿರ್ದೇಶಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗೆ ವೈಭವ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಅವಶ್ಯಕತೆ ಇರುವವರಿಗೆ ಸಹಾಯ ಮಾಡಬೇಕು. ಗಾಂಧೀಜಿ ಹುಟ್ಟಿದ ಈ ನಾಡಲ್ಲಿ ಪ್ರಾಮಾಣಿಕತೆ ಬಗ್ಗೆ ತಿಳಿಸಿ ಹೇಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಸಹಕಾರಿ ಕ್ಷೇತ್ರಕ್ಕೆ ಸಿದ್ದನಗೌಡ ಪಾಟೀಲ ಹಂಚಿನಾಳ ಸದಾ ಸ್ಮರಣೀಯರು ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಹಕಾರ ಯೂನಿಯನ್ ಜಿಲ್ಲಾಧ್ಯಕ್ಷ ವಿ.ಎನ್. ಭಟ್ ಅಳ್ಳಂಕಿ ಮಾತನಾಡಿ, ಪ್ರಾಮಾಣಿಕತೆ ಹಾಗೂ ವಿಶ್ವಾಸದ ಸೇವೆ ಇರುವಲ್ಲಿ ಸಹಕಾರಿ ಕ್ಷೇತ್ರ ಬೆಳೆಯುತ್ತದೆ. ಈ ದಿಸೆಯಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದರು.

    ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ರಾಘವ ವಿಷ್ಣು ಬಾಳೇರಿ, ನಿರ್ದೇಶಕ ಪ್ರಭಾಕರ ಸಿ. ಮಣಕೀಕರ, ಲೆಕ್ಕ ಪರಿಶೋಧನ ಇಲಾಖೆಯ ಉಪನಿರ್ದೇಶಕ ಸುಭಾಷ ತಳವಾರ, ಸಹಕಾರ ಸಮನ್ವಯಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ, ಸಹಕಾರ ಯೂನಿಯನ್ ಇಒ ಗೋಪಾಲ ನಾಯಕ, ಎಸ್. ವಿ. ಹೆಗಡೆ ಭದ್ರನ್ ಇತರರಿದ್ದರು.

    ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಆರ್​ಬಿಐ ಅರ್ಬನ್ ಬ್ಯಾಂಕುಗಳ ಪ್ರಧಾನ ವ್ಯವಸ್ಥಾಪಕಿ ಮೀನಾಕ್ಷಿ ಗಡ್, ಆರ್​ಬಿಐ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಬ್ಯಾಂಕುಗಳು ವಹಿಸಬೇಕಾದ ಕಾಳಜಿ ಮತ್ತು ಆರ್​ಬಿಐ ಇತ್ತೀಚಿನ ತಿದ್ದುಪಡಿ ಕುರಿತು ವಿವರಿಸಿದರು. ಶಿರಸಿಯ ಸನ್ನದು ಲೆಕ್ಕ ಪರಿಶೋಧಕ ಮಂಜುನಾಥ ಶೆಟ್ಟಿ, ಅರ್ಬನ್ ಬ್ಯಾಂಕ್​ಗಳಿಗೆ ಅನ್ವಯಿಸುವ ಜಿಎಸ್​ಟಿ ಮತ್ತು ಆದಾಯ ತೆರಿಗೆ ಕುರಿತು, ಬೆಂಗಳೂರು ಅಪೆಕ್ಸ್ ಬ್ಯಾಂಕ್ ನಿವೃತ್ತ ಮ್ಯಾನೆಜರ್ ಶಿವಾನಂದ ಜಿ. ಕುಲಕರ್ಣಿ, ಸೈಬರ್ ಸೆಕ್ಯುರಿಟಿ ಮತ್ತು ಫ್ರಾಡ್ಸ್ ಕುರಿತು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts