More

    ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸಕ್ಕೂ ಮುನ್ನ ಆಘಾತ, ಪ್ರಮುಖ ಅರ್ಚಕರೊಬ್ಬರಿಗೆ ಕರೊನಾ ವೈರಾಣು ಸೋಂಕು

    ನವದೆಹಲಿ: ಅಯೋಧ್ಯೆಯಲ್ಲಿ ಆ.5ರಂದು ನಿಗದಿಯಾಗಿರುವಂತೆ ಆ.5ರಂದು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿರುವ ಈ ಕಾರ್ಯಕ್ರಮ ನಡೆಯಲು ಕೆಲವೇ ದಿನಗಳು ಬಾಕಿಯಿರುವಂತೆ ರಾಮ ಜನ್ಮಭೂಮಿಯ ಅರ್ಚಕ ಪ್ರದೀಪ್​ ದಾಸ್​ ಅವರಿಗೆ ಕೋವಿಡ್​-19 ಸೋಂಕು ತಗುಲಿರುವುದು ಖಚಿತಪಟ್ಟಿದೆ.

    ಅರ್ಚಕ ಪ್ರದೀಪ್​ ದಾಸ್​ ಅವರು ಆಚಾರ್ಯ ಸತ್ಯೇಂದ್ರ ದಾಸ್​ ಅವರ ಪ್ರಮುಖ ಶಿಷ್ಯ ಬಳಗದಲ್ಲಿ ಒಬ್ಬರಾಗಿದ್ದಾರೆ. ಅಲ್ಲದೆ, ರಾಮ ಜನ್ಮಭೂಮಿ ಸ್ಥಳದಲ್ಲಿರುವ ಶ್ರೀ ರಾಮ ಮೂರ್ತಿಗೆ ಪೂಜೆ ಸಲ್ಲಿಸುವ ನಾಲ್ವರು ಅರ್ಚಕರ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಸದ್ಯಕ್ಕೆ ಪ್ರದೀಪ್​ ದಾಸ್​ ಅವರನ್ನು ಹೋಂಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

    ಶಿಲ್ಯಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅಲ್ಲದೆ, 200 ಅತಿಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾರಂಭವನ್ನು ಭವ್ಯವಾಗಿ ಸಂಘಟಿಸಲು ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್​​ ಶ್ರಮಿಸುತ್ತಿದೆ.

    ಆಗಸ್ಟ್ 6 ಇಲ್ಲವೇ 8ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts