VIDEO: ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಪುಂಡರಿಗೆ ರಸ್ತೆ ಮಧ್ಯೆಯೇ ಬಸ್ಕಿ ಹೊಡೆಸಿದ ಪೊಲೀಸರು!

Car
Published on

ಅಹಮದಾಬಾದ್: ಯುವಕರ ತಂಡವೊಂದು ಚಲಿಸುತ್ತಿದ್ದ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟಿಕೆ ಮೆರೆದವರನ್ನು ಪೊಲೀಸರು ಬಂಧಿಸಿ, ರಸ್ತೆ ಮಧ್ಯೆಯೇ ಬಸ್ಕಿ ಹೊಡೆಸಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಹೊಡೆಯುವುದು ಸಾಮಾನ್ಯ. ಆದರೆ ಎಲ್ಲಿ ಮತ್ತು ಹೇಗೆ ಪಟಾಕಿ ಸಿಡಿಸುತ್ತೇವೆ ಎಂಬುವುದು ಕೂಡ ಮುಖ್ಯವಾಗುತ್ತದೆ. ಪಟಾಕಿ ಸಿಡಿಸಿ ಸಂಭ್ರಮಿಸುವಾಗ ಸಾರ್ವಜನಿಕವಾಗಿ ಯಾವುದೇ ತೊಂದರೆಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಆದರೆ ಈ ಯುವಕರು ಪಟಾಕಿ ಸಿಡಿಸುವ ಸಂಭ್ರಮದ ನೆಪದಲ್ಲಿ ಹುಚ್ಚಾಟ ಮೆರೆದಿದ್ದಾರೆ.

ಮುಖ್ಯರಸ್ತೆಯಲ್ಲಿ ಚಲಿಸುತ್ತಿರುವ ಕಾರಿನ ಬೋನೆಟ್ ಮೇಲೆ ಕುಳಿತುಕೊಂಡು ಪಟಾಕಿ ಸಿಡಿದ್ದಾರೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಯುವಕರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಸಾರ್ವಜನಿಕವಾಗಿ ಪುಂಡಾಟ ಮೆರೆದ ಯುವಕರಿಗೆ, ಪೊಲೀಸರು ರಸ್ತೆ ಮಧ್ಯೆಯೇ ಶಿಕ್ಷೆ ನೀಡಿದ್ದಾರೆ. ಬಂಧಿಸಿದ ಅಷ್ಟೂ ಜನ ಯುವಕರಿಗೆ ರಸ್ತೆ ಮಧ್ಯೆಯೇ ಬಸ್ಕಿ ತೆಗೆಯುವಂತೆ ಹೇಳಿದ್ದಾರೆ. ಈ ವಿಡಿಯೋವನ್ನು ಅಹಮದಾಬಾದ್ ಪೊಲೀಸರು ತಮ್ಮ ಅಧಿಕೃತ ಟ್ವಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪೊಲೀಸರು ಈ ಕ್ರಮವನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net