More

    ಅಕೌಂಟೆಂಟ್ಸ್​-ಆಡಿಟರ್ಸ್​ ಕೆಲಸಕ್ಕೆ ಕುತ್ತು ತರಲಿದೆ ಕೃತಕ ಬುದ್ಧಿಮತ್ತೆ: ಕೇಂದ್ರ ಹಣಕಾಸು ಕಾರ್ಯದರ್ಶಿ

    ಚೆನ್ನೈ: ಕೃತಕ ಬುದ್ಧಿಮತ್ತೆಯಿಂದ ಕೆಲವರ ಕೆಲಸಕ್ಕೆ ಕುತ್ತು ಬರಲಿದೆ ಎಂಬ ಅಭಿಪ್ರಾಯ ಆಗಾಗ ಅಲ್ಲೊಂದು ಇಲ್ಲೊಂದು ಎಂಬಂತೆ ಕೇಳಿ ಬರುತ್ತಿರುತ್ತದೆ. ಇದೀಗ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಕೂಡ ಇಂಥದ್ದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಹಣಕಾಸು ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಟಿ.ವಿ.ಸೋಮನಾಥನ್ ಅವರು ಶನಿವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಾರ್ಟರ್ಡ್ ಅಕೌಂಟೆಂಟ್​ಗಳನ್ನು ಉದ್ದೇಶಿಸಿ ಮಾತನಾಡುತ್ತ ಇಂಥದ್ದೊಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    ಆರ್ಥಿಕತೆಯಲ್ಲಿ ಕೃತಕ ಬುದ್ಧಿಮತ್ತೆ ನಿರ್ದಿಷ್ಟವಾದ ಪ್ರಭಾವವನ್ನು ಹೊಂದಿದೆ ಮತ್ತು ವ್ಯಾಪಾರ ಪ್ರಕ್ರಿಯೆಯ ಸ್ವಯಂಚಾಲಿತತೆಯು ಕೃತಕ ಬುದ್ಧಿಮತ್ತೆಯೊಂದಿಗೆ ಹೆಚ್ಚು ಪ್ರಬಲವಾಗಿದೆ. ಹೀಗಾಗಿ ಅಕೌಂಟೆಂಟ್ಸ್​ ಮತ್ತು ಆಡಿಟರ್ಸ್​ ಮಾಡುತ್ತಿರುವ ಕೆಲಸಕ್ಕೆ ಇದು ಸ್ವಲ್ಪಮಟ್ಟಿಗೆ ಕುತ್ತು ತರಬಹುದು ಎಂದು ಅವರು ತಿಳಿಸಿದರು.

    ರಾಜ್ಯೋತ್ಸವ ರಸಪ್ರಶ್ನೆ - 22

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts