ಅಮ್ಮಾ ಮತ್ತೆ ಹುಟ್ಟಿ ಬಾ…

ಚೆನ್ನೈ: ತಮಿಳುನಾಡು ಸಿಎಂ ಜಯಲಲಿತಾ ನಿಧನ ಸುದ್ದಿ ತಿಳಿದು ಅಂತಿಮ ದರ್ಶನ ಪಡೆಯಲು ಆಗಮಿಸಿರುವ ಸಹಸ್ರಾರು ಮಹಿಳೆಯರು ಸೇರಿ ಅವರ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ‘ತಾಯಿಯನ್ನೇ ಕಳೆದುಕೊಂಡೆವಲ್ಲ’ ಎಂದು ಅಭಿಮಾನಿಗಳು ಕಣ್ಣೀರಿಡುತ್ತಿರುವ ದೃಶ್ಯಾವಳಿಗಳೇ ಕಾಣಿಸುತ್ತಿವೆ.

ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಚೆನ್ನೈನ ರಾಜಾಜಿಹಾಲ್ನಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿದೆ. ಕಳೆದ ರಾತ್ರಿಯಿಂದ ಈತನಕ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಅಂತಿಮ ದರ್ಶನ ಪಡೆದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

 

 

<

Leave a Reply

Your email address will not be published. Required fields are marked *