ಬೆಳಗಾವಿ: ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಷ್ಟೀಯ ನಾಯಕರು. ಅವರ ಹಾಗೂ ಪಕ್ಷದ ವರಿಷ್ಟರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿ ದುಡಿಯುತ್ತೇವೆ ಎಂದರು.
ಇದನ್ನೂ ಓದಿ: ಜಲ್ ಜೀವನ್ ಯೋಜನೆಯಡಿ 1640 ಕಾಮಗಾರಿಗೆ ಮಂಜೂರು
ಸಚಿವ ಆರ್. ಬಿ. ತಿಮ್ಮಾಪುರ ಅವರ ದಲಿತ ಸಿಎಂ ಹೇಳಿಕೆ ಹಾಗೂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎನ್ನುವ ಹೇಳಿಕೆಗೆ, “ಏನೇನೋ ಹೇಳುವ ನಿಮ್ಮ (ಮಾಧ್ಯಮ) ಮಾತುಗಳಿಗೆ ನಾನು ಉತ್ತರ ನೀಡಲು ಸಿದ್ಧನಿಲ್ಲ” ಎಂದರು.
ಬಿಜೆಪಿಗೆ ತಿರುಗೇಟು
ಬೆಳಗಾವಿಯಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, ಇದೇ ಬೆಳಗಾವಿ ನೆಲದಲ್ಲಿನ ಗಾಂಧಿ ಬಾವಿಯಿಂದ ನೀರನ್ನು ತೆಗೆದು ನೆಲವನ್ನು ಸ್ವಚ್ಛ ಮಾಡಿ. ಬಿಜೆಪಿ ಮಾಡಿದ್ದ ಕೊಳೆ, ಕಸವನ್ನು ಗುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ: Conviction: ಬುದ್ಧಿ ಮಾಂದ್ಯೆಯ ಮೇಲೆ ಅತ್ಯಾಚಾರ ಮಾಡಿದ್ದ ದುರುಳನಿಗೆ 10 ವರ್ಷ ಜೈಲು ಶಿಕ್ಷೆ
ಸತೀಶ್ ಜಾರಕಿಹೊಳಿ ಅವರು ಸೇರಿದಂತೆ 30 ಕ್ಕೂ ಹೆಚ್ಚು ಶಾಸಕರ ದುಬೈ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ, ಇದರ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ. ನಾನು ಇದರ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದರು.
ಇದನ್ನೂ ಓದಿ: Conviction: ಬುದ್ಧಿ ಮಾಂದ್ಯೆಯ ಮೇಲೆ ಅತ್ಯಾಚಾರ ಮಾಡಿದ್ದ ದುರುಳನಿಗೆ 10 ವರ್ಷ ಜೈಲು ಶಿಕ್ಷೆ
ನಕಲಿ ಗಾಂಧಿಗಳು ಸಮಾವೇಶ ಮಾಡುತ್ತಿದ್ದಾರೆ ಎನ್ನುವ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಇಡೀ ದೇಶದಲ್ಲಿ ಒಬ್ಬರೇ ಗಾಂಧಿ ಇರುವುದು. ನಾವೆಲ್ಲರೂ ಸಹ ಗಾಂಧಿ ವಂಶಸ್ಥರೇ, ಗಾಂಧಿ ಅವರು ಕಟ್ಟಿದ ಭಾರತದವರು. ಅದಕ್ಕೆ ನಾವು ಗಾಂಧಿ ಭಾರತ ಎಂದು ಹೆಸರಿಟ್ಟು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು