More

  ಕಾರ್ಮಿಕ ಮಹಿಳೆಯ ಚಿಕಿತ್ಸೆಗೆ ನೆರವು

  ಸಿದ್ದಾಪುರ: ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಮಹಿಳೆಗೆ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಮಠ ಗ್ರಾಮಸ್ಥರು ಒಗ್ಗೂಡಿ ಹಣ ಸಂಗ್ರಹಿಸಿ ನೀಡಿದ್ದಾರೆ.

  ಗ್ರಾಮದ ವಿಜಯ್ ಅವರ ಪತ್ನಿ ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಹಣದ ಅವಶ್ಯಕತೆ ಇತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾತಿ, ಭೇದವಿಲ್ಲದೆ ಒಗ್ಗೂಡಿ ಅಂದಾಜು 40,000 ರೂ. ಸಂಗ್ರಹ ಮಾಡಿ ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯ ಮಹಮದ್ ಅಲಿ ಅವರ ಮೂಲಕ ಮಹಿಳೆಯ ತುರ್ತು ಚಿಕಿತ್ಸೆಗೆ ನೆರವಾಗಿದ್ದಾರೆ.

  ದೇವಸ್ಥಾನ ಸಮಿತಿ ಅಧ್ಯಕ್ಷ ಮನೋಹರ್, ಮಸೀದಿ ಕಮಿಟಿ ಅಧ್ಯಕ್ಷ ನಜೀರ್, ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯ ಮೊಹಮ್ಮದ್ ಅಲಿ ಸೇರಿದಂತೆ ಮಹಿಳಾ ಸಂಘದ ಕಾರ್ಯಕರ್ತರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts