More

    ಏಮ್ಸ್ ಬಗ್ಗೆ ಜನಪ್ರತಿನಿಧಿಗಳಿಂದ ಪೊಳ್ಳು ಭರವಸೆ

    ರಾಯಚೂರು: ಜಿಲ್ಲೆಯ ಪಕ್ಷದ ಪ್ರಮುಖರ ಒತ್ತಾಸೆ ಮೇರೆಗೆ ವಿಧಾನಸಭೆ ಚುನಾವಣೆಯ ಜೆಡಿಎಸ್ ಪ್ರಣಾಳಿಕೆಯಲ್ಲಿ ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡುವ ಅಂಶವನ್ನು ಪಕ್ಷದ ವರಿಷ್ಠರು ಸೇರ್ಪಡೆ ಮಾಡಿದ್ದಾರೆ ಎಂದು ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಶಿವಶಂಕರ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದರ ಜತೆಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಲಾಗುತ್ತಿದೆ ಎಂದರು.

    ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಏಮ್ಸ್ ಮಂಜೂರು ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಸೇರಿ ಎಲ್ಲರೂ ಕೇವಲ ಭರವಸೆ ನೀಡಿದರೆ ಹೊರತು ಯಾವುದೇ ಕ್ರಮಕೈಗೊಳ್ಳಲಿಲ್ಲ.

    ಈ ಹಿಂದೆ ಐಐಟಿ ಸ್ಥಾಪನೆಗೆ ನಡೆದ ಹೋರಾಟದ ಸಂದರ್ಭದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ರಾಯಚೂರು ಜತೆಗೆ ಧಾರವಾಡ, ಮೈಸೂರು ಹೆಸರನ್ನು ಶಿಫಾರಸು ಮಾಡಿ ಜಿಲ್ಲೆಗೆ ವಂಚನೆ ಮಾಡಿದ್ದರು. ಈಗ ಬಿಜೆಪಿ ಸರ್ಕಾರವೂ ಜಿಲ್ಲೆಗೆ ಅನ್ಯಾಯ ಮಾಡಿದೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಮುಂದಾಗಬೇಕು ಎಂದು ಎನ್.ಶಿವಶಂಕರ ತಿಳಿಸಿದರು. ಪದಾಧಿಕಾರಿಗಳಾದ ಯುಸೂಫ್‌ಖಾನ್, ದಾನಪ್ಪ ಯಾದವ, ನರಸಿಂಹಲು, ವಿಶ್ವನಾಥ ಪಟ್ಟಿ, ಫಾತೀಮಾ ಹುಸೇನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts