

President: ಕರ್ನಾಟಕದ ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವದ ಕಾರ್ಯಕ್ರಮದಲ್ಲಿ ಸೋಮವಾರ (ಸೆಪ್ಟೆಂಬರ್ 1) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿ, ಶಿಕ್ಷಣ, ವೈದ್ಯಕೀಯ ಮತ್ತು ವಾಕ್ ಮತ್ತು ಶ್ರವಣಕ್ಕೆ ಸಂಬಂಧಿಸಿದ ಸಂಶೋಧನೆಯಲ್ಲಿ ಸಂಸ್ಥೆಯ ಕೊಡುಗೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಶಿಕ್ಷಣ, ವೈದ್ಯಕೀಯ, ವಾಕ್ ಮತ್ತು ಶ್ರವಣಕ್ಕೆ ಸಂಬಂಧಿಸಿದ ಸಂಶೋಧನೆಯಲ್ಲಿ ಗಣನೀಯವಾಗಿ ಕೊಡುಗೆಗಳನ್ನು ನೀಡಿರುವ ಈ ಪ್ರತಿಷ್ಠಿತ ಸಂಸ್ಥೆಯ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವುದು "ನನಗೆ ಅಪಾರ ಸಂತೋಷ"ವನ್ನು ನೀಡಿದೆ ಎಂದರು.
ಇದನ್ನೂ ಓದಿ: ಓಣಂ ಆಚರಣೆಯ ವೇಳೆ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಉದ್ಯೋಗಿ ಸಾವು..Onam Celebration ಈ ಸಂದರ್ಭದಲ್ಲಿ ಈ ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ ಹಾಗೂ ಸಂವಹನ ಅಸ್ವಸ್ಥತೆಗಳ ರೋಗನಿರ್ಣಯ ಮತ್ತು ಚಿಕಿತ್ಸೆಯಲ್ಲಿ ಸಂಸ್ಥೆಯೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ನಿರ್ದೇಶಕರು, ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
AIISH ರಾಷ್ಟ್ರೀಯ ಸಂಸ್ಥೆಯು 1965 ರಲ್ಲಿ ಸ್ಥಾಪನೆಯಾಯಿತು. ಇದು ದುರ್ಬಲರಿಗೆ ವೈದ್ಯಕೀಯ, ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳನ್ನು ನೀಡುವ ಸಂಸ್ಥೆಯಾಗಿದೆ. ಭಾರತ ಸರ್ಕಾರದ ಸ್ವಾಯತ್ತತೆಯಲ್ಲಿ ಬರುವ ಸಂಸ್ಥೆಯಾಗಿದ್ದು, ಮಾನವ ಸಂಪನ್ಮೂಲ, ಅಭಿವೃದ್ಧಿ, ಕ್ಲೀನಿಕಲ್ ಸೇವೆಗಳು, ತರಬೇತಿ, ಸಂಶೋಧನೆ, ಸರ್ವಜನಿಕ ಶಿಕ್ಷಣ ಸೇವೆ ನೀಡುವ ದಕ್ಷಿಣಾ ಏಷ್ಯಾದ್ಯಂತ ಪ್ರಮುಖ ಸಂಸ್ಥೆಯಾಗಿದೆ.
ಸಂವಹನ ಅಸ್ವಸ್ಥತೆಯನ್ನು ಹೊಂದಿರುವ ವ್ಯಕ್ತಿಗಳಿಗಾಗಿ ಚಿಕಿತ್ಸೆ ನೀಡಲು ಈ ಸಂಸ್ಥೆಯನ್ನು ಸ್ಥಾಪಿಸಿದೆ. ಹಾಗೇಯೇ ಈ ಸಂಸ್ಥೆಯು ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಡಾಕ್ಟರೇಟ್, ಫಿಲೋಶಿಪ್ ಕೋರ್ಸ್ಗಳನ್ನು ನೀಡುವುದಲ್ಲದೆ, ರೋಗಿಗಳು ಹಾಗೂ ಅವರ ಕುಟುಂಬಗಳಿಗೆ ಪುನರ್ವಸತಿ ನೀಡುವುದರ ಜೊತೆಗೆ ಬೆಂಬಲ ನೀಡುತ್ತದೆ. (ಏಜೆನ್ಸೀಸ್)