More

  ಐಮಂಗಲದಲ್ಲಿ ರಕ್ತದಾನ ಶಿಬಿರ

  ಐಮಂಗಲ: ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗ್ರಾಮದ ಪೊಲೀಸ್ ತರಬೇತಿ ಶಾಲೆ ಆವರಣದಲ್ಲಿ ಜ.12ರ ಬೆಳಗ್ಗೆ 10ಕ್ಕೆ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

  ಸಚಿವ ಬಿ.ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕಿ ಕೆ.ಪೂರ್ಣಿಮಾ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ಸಂಸದ ಎ.ನಾರಾಯಣಸ್ವಾಮಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯರಾದ ಟಿ.ಆರ್.ರಾಜೇಶ್ವರಿ, ಕೆ.ಅನಂತ್, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಸದಸ್ಯರಾದ ತಿಪ್ಪೇಸ್ವಾಮಿ, ಚಂದ್ರಪ್ಪ, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಜಿಪಂ ಸಿಇಒ ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್, ಎಸ್ಪಿ ಪಿ.ಪಾಪಣ್ಣ ಭಾಗವಹಿಸುವರು ಎಂದು ಡಾ.ಚಂದ್ರಕಾಂತ್ ಗೌಡರ್ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts