ಚೆನ್ನೈ: ತಮಿಳುನಾಡಿನಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ( Air India flight ) ದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಇದಕ್ಕೂ ಮುನ್ನ ಕೆಲವು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ವಿಮಾನ ಗಿರಕಿ ಹೊಡೆದಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು. ಕೊನೆಗೂ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
IX613 ವಿಮಾನ 141 ಪ್ರಯಾಣಿಕರೊಂದಿಗೆ ಇಂದು ಸಂಜೆ ಸಂಜೆ 5.40ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ಇದರ ಬೆನ್ನಲ್ಲೇ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಪೈಲಟ್ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡಿದ್ದಾರೆ.
ಇನ್ನು ವಿಮಾನದಲ್ಲಿ ಇಂಧನ ತುಂಬಿದ್ದರಿಂದ ತಕ್ಷಣವೇ ಸುರಕ್ಷಿತ ಲ್ಯಾಂಡಿಂಗ್ ಸಾಧ್ಯವಾಗದೇ ತಿರುಚ್ಚಿ ಬಳಿ ಸುಮಾರು 2.30 ಗಂಟೆಗಳ ಕಾಲ ಆಕಾಶದಲ್ಲಿ ಸುತ್ತಾಡಿದೆ. ವಿಮಾನದಲ್ಲಿ ಇಂಧನ ಕಡಿಮೆಯಾದ ಬಳಿಕ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಯಿತು.
#WATCH | Tamil Nadu: The Air India Express Flight IX 613 from Tiruchirapalli to Sharjah, which faced a technical problem (Hydraulic failure), has landed safely at Tiruchirapalli airport.
(Outside visuals from Tiruchirapalli airport) pic.twitter.com/ttcQCMW7HJ
— ANI (@ANI) October 11, 2024
ವಿಮಾನ ಲ್ಯಾಂಡಿಂಗ್ ವೇಳೆ ಯಾವುದೇ ದೊಡ್ಡ ಅಪಘಾತ ಸಂಭವಿಸದಂತೆ ಖಚಿತಪಡಿಸಿಕೊಳ್ಳಲು 20ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ಇರಿಸಲಾಗಿತ್ತು. ಈ ಘಟನೆ ಸಂಬಂಧ ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.
ಈ ಫೋಟೋದಲ್ಲಿರುವ ಬಾಲಕ ಇಂದು ಭಾರತೀಯ ಚಿತ್ರರಂಗದ ಸೂಪರ್ಸ್ಟಾರ್! ಸಾಧ್ಯವಾದ್ರೆ ಗುರುತಿಸಿ| Star Hero