More

    ಭಾರತೀಯರು ಸೇರಿ ಒಟ್ಟು 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನೇಪಾಳದಲ್ಲಿ ಪತನ: 36ಕ್ಕೇರಿದ ಸಾವಿನ ಸಂಖ್ಯೆ

    ಕಠ್ಮಂಡು: ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇ ಬಳಿ ಏರ್‌ಲೈನ್ಸ್ ಎಟಿಆರ್​-72 ವಿಮಾನ ಪತನಗೊಂಡ ದುರ್ಘಟನೆಯಲ್ಲಿ ಸಾವಿನ ಸಂಖ್ಯೆಹೆಚ್ಚುತ್ತಲೇ ಇದ್ದು, ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ.

    ಈ ವಿಮಾನದಲ್ಲಿ 68 ಪ್ರಯಾಣಿಕರು ಸೇರಿ ನಾಲ್ವರು ಸಿಬ್ಬಂದಿ ಇದ್ದರು. ಇದರಲ್ಲಿ ಐವರು ಭಾರತೀಯರೂ ಇದ್ದರು. ಇದುವರೆಗೆ 36 ಮೃತದೇಹಗಳು ಪತ್ತೆಯಾಗಿದ್ದು, ಮೃತರ ಗುರು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಹಲವರು ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

    72 ಆಸನಗಳ ಪ್ರಯಾಣಿಕ ವಿಮಾನವು ಭಾನುವಾರ ಬೆಳಗ್ಗೆ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಬಳಿ ಪತನಗೊಂಡಿದೆ. ಈ ವಿಮಾನದಲ್ಲಿ 53 ನೇಪಾಳಿ, ಐವರು ಭಾರತೀಯರು, ನಾಲ್ವರು ರಷ್ಯನ್, ಒಬ್ಬ ಐರಿಶ್, ಇಬ್ಬರು ಕೊರಿಯನ್​, ಒಬ್ಬರು ಅರ್ಜೆಂಟೀನಿಯನ್ ಮತ್ತು ಒಬ್ಬ ಫ್ರೆಂಚ್ ಪ್ರಜೆ ಇದ್ದರು. ಈ ಪೈಕಿ ಇಬ್ಬರು ಮಕ್ಕಳು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ: ನೇಪಾಳದಲ್ಲಿ ಮಡುಗಟ್ಟಿದ ಆತಂಕ

    ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts