ವಿಮಾನ ಪತನ ನ್ಯಾಯಾಂಗ ತನಿಖೆಗೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

blank

ಘೋರ ಘಟನೆಯಾಗಿದ್ದು, ದುರಂತ ಸಂಭವಿಸಿದ್ದು ತಮಗೆ ಅತೀವ ನೋವು ತರಿಸಿದೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಗುಜರಾತಿನ ಮಾಜಿ ಸಿಎಂ ವಿಜಯ ರೂಪಾನಿ ಸೇರಿದಂತೆ ೨೪೨ ಪ್ರಯಾಣಿಕರನ್ನು ಹೊತ್ತುಕೊಂಡು ಅಹಮದಾಬಾದನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲಹೊತ್ತಿನಲ್ಲಿಯೇ ಪತನಗೊಂಡಿರುವುದಕ್ಕೆ ಎಐಸಿಸಿ ಅಧ್ಯಕ್ಷರಾಗಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಘಾತ ಮತ್ತು ದಿಗ್ಭö್ರಮೆ ವ್ಯಕ್ತಪಡಿಸಿದ್ದಾರೆ.
ಇದೊಂದು ಘೋರ ಘಟನೆಯಾಗಿದ್ದು, ದುರಂತ ಸಂಭವಿಸಿದ್ದು ತಮಗೆ ಅತೀವ ನೋವು ತರಿಸಿದೆ. ಏನು ಹೇಳಬೇಕು ಎಂದು ತೋಚುತ್ತಿಲ್ಲ. ಕೂಡಲೇ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರ ರಕ್ಷಣಾ ಕೆಲಸ ಚುರುಕುಗೊಳಿಸಬೇಕು. ವಿಮಾನ ಜನವಸತಿ ಪ್ರದೇಶದಲ್ಲಿ ಬಿದ್ದಿರಿರುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಳಗೊಳ್ಳುವ ಸಾಧ್ಯತೆ ಇರುವುದರಿಂದ ಮೊದಲು ಉಳಿದವರನ್ನು ರಕ್ಷಿಸಿ ಚಿಕಿತ್ಸೆ ನೀಡಿ ಬದುಕಿಸುವ ಕೆಲಸ ಮಾಡಬೇಕು. ಈ ರಕ್ಷಣಾ ಕೆಲಸಕ್ಕೆ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡುವಂತೆ ಸೂಚಿಸಿz್ದೆÃನೆ. ಸಂಘ-ಸAಸ್ಥೆಯವರು ಸಹ ಆಡಳಿತದ ಜತೆಗೆ ಕೈಜೋಡಿಸಿ ಉಳಿದವರನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು.
ಗುರುವಾರ ನಗರದಲ್ಲಿ ಭೇಟಿಯಾದ ಪತ್ರಕರ್ತರ ಜತೆ ಮಾತನಾಡಿ, ಘನ-ಘೋರ ದುರಂತವಾಗಿದೆ.ಯಾವ ಕಾರಣಕ್ಕೆ ವಿಮಾನ ಪತನವಾಯಿತು. ಘಟನೆಗೆ ತಾಂತ್ರಿಕ ಕಾರಣವೇ ಇಲ್ಲವೇ ಬೇರೆ ಏನಾದರೂ ಕಾರಣ ಎಂಬುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ತನಿಖಗೆ ಸುಪ್ರೀಂಕೋರ್ಟ್ನ ಹಾಲಿ ಇಲ್ಲವೇ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.
ಘಟನೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊತ್ತುಕೊಳ್ಳಬೇಕು. ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದರು. ಘಟನೆಯಲ್ಲಿ ಬಲಿಯಾದವರಿಗೆ ಶ್ರದ್ದಾಂಜಲಿ ಸಲ್ಲಿಸುವೆ. ಅವರ ಕುಟುಂಬದವರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ಭಗವಂತ ಕರುಣಿಸಲಿ. ವಿಮಾನ ಹಾರಾಟಕ್ಕೆ ಪ್ರತಿಕೂಲ ವಾತಾವರಣವಿದ್ದರೂ ಕೆಲವರು ಪಯಣಿಸಲಿ ಎಂದರು ಎನ್ನಲಾಗುತ್ತಿದೆ. ತಾಂತ್ರಿಕ ತೊಂದರೆ ಕಾರಣವೇ, ಪೈಲಟ್ ವಿಫಲತೆ ಹೀಗೆ ಎಲ್ಲವೂ ತನಿಖೆಯಿಂದ ಬೆಳಕಿಗೆ ಬರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕೋಟ್
ಅಹಮದಾಬಾದ್‌ನಲ್ಲಿ ವಿಮಾನ ಪತವಾಗಿರುವ ಕುರಿತು ಸುಪ್ರೀಂ ಕೋರ್ಟ್ ಹಾಲಿ ಇಲ್ಲವೇ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.ದುರಂತದಲ್ಲಿ ಬದುಕುಳಿದವರಿಗೆ ಮೊದಲು ರಕ್ಷಿಸುವ ಚಿಕಿತ್ಸೆ ಕೊಡಿಸಬೇಕು. ಘೋರ ಘಟನೆಯ ಹೊಣೆಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು. ಮೃತರಿಗೆ ಸೂಕ್ತ ಪರಿಹಾರ ನೀಡಬೇಕು.
| ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ

 

 

 

=====

 

Share This Article

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style

life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…

ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್

ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…