More

    ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ

    ಬೆಂಗಳೂರು: ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಕೋರಮಂಗಲದಲ್ಲಿ ನಡೆದಿದೆ. ಹಿಮಾಚಲಪ್ರದೇಶ ಮೂಲದ ಅರ್ಚನಾ ಧೀಮನ್ (28) ಮೃತ ಗಗನಸಖಿ.

    ಕೋರಮಂಗಲದ 8ನೇ ಬ್ಲಾಕ್‌ನ ರೇಣುಕಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಘಟನೆ ಸಂಬಂಧ ಮೃತಳ ಪ್ರಿಯಕರ ಮಂಗಳೂರು ಮೂಲದ ಆದೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

    ಮೃತ ಅರ್ಚನಾ ಅಂತಾರಾಷ್ಟ್ರೀಯ ವಿಮಾನಯಾನ ಕಂಪನಿಯಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದಳು. ಆಕೆಯ ಪ್ರಿಯಕರ ಸಾಫ್ಟ್‌ವೇರ್ ಇಂಜಿನಿಯರ್ ಆದೇಶ್ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಆರು ತಿಂಗಳ ಹಿಂದೆ ಸ್ನೇಹಿತರ ಮೂಲಕ ಅರ್ಚನಾ ಮತ್ತು ಆದೇಶ್ ಪರಸ್ಪರ ಪರಿಚಿತರಾಗಿದ್ದರು. ಪರಿಚಯ ಸ್ನೇಹಕ್ಕೆ ತಿರುಗಿ ಇಬ್ಬರೂ ಪ್ರೀತಿಸಲು ಆರಂಭಿಸಿದ್ದರು. ಕೆಲ ವಿಚಾರಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯವಿತ್ತು. ಹೀಗಾಗಿ ಆಗಾಗ ಜಗಳವಾಡುತ್ತಿದ್ದರು ಎನ್ನಲಾಗಿದೆ.

    ಇದನ್ನೂ ಓದಿ: ಎರಡನೇ ಮಹಡಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದ 3 ವರ್ಷದ ಮಗು!

    ಕಾರ್ಯನಿಮಿತ್ತ ದುಬೈನಲ್ಲಿದ್ದ ಅರ್ಚನಾ ನಾಲ್ಕು ದಿನದ ಹಿಂದೆ ದುಬೈನಿಂದ ಬೆಂಗಳೂರಿಗೆ ಬಂದಿದ್ದಳು. ಈ ನಾಲ್ಕು ದಿನ ಇಬ್ಬರು ಒಟ್ಟಿಗಿದ್ದರು. ಶುಕ್ರವಾರ ಸಂಜೆ ಕೋರಮಂಗಲದ ಫೋರಂ ಮಾಲ್‌ನಲ್ಲಿ ಸಿನಿಮಾಕ್ಕೆ ತೆರಳಿದ್ದರು. ರಾತ್ರಿ ಸಿನಿಮಾ ನೋಡಿಕೊಂಡು ಅಪಾರ್ಟ್‌ಮೆಂಟ್‌ಗೆ ಬಂದಿದ್ದು, ಇಬ್ಬರೂ ಸೇರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ವಾಗ್ವಾದವಾಗಿದೆ. ಮಧ್ಯರಾತ್ರಿ 12 ಗಂಟೆಗೆ ಅರ್ಚನಾ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ. ಸದ್ಯ ಅಪಾರ್ಟ್‌ಮೆಂಟ್ ಸೇರಿ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಮೊಬೈಲ್​ಫೋನ್ ಕಳೆದುಹೋದರೆ ತಕ್ಷಣ ಹೀಗೆ ಮಾಡಿ; ಕೊರಿಯರ್​ನಲ್ಲಿ ಫೋನ್​ ವಾಪಸ್!

    ಮುಂದುವರಿದ ತನಿಖೆ: ಯಾವ ವಿಚಾರಕ್ಕೆ ಆದೇಶ್ ಮತ್ತು ಅರ್ಚನಾ ನಡುವೆ ಜಗಳ ನಡೆದಿದೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಜಗಳದ ವೇಳೆ ಅರ್ಚನಾ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಳಾ? ಅಥವಾ ಪ್ರಿಯಕರ ಆದೇಶ್ ಜಗಳದ ವೇಳೆ ಕೋಪಗೊಂಡು ಮಹಡಿಯಿಂದ ನೂಕಿ ಕೊಲೆ ಮಾಡಿದನಾ ಎಂಬುದು ಮುಂದಿನ ತನಿಖೆಯಿಂದ ತಿಳಿದುಬರಬೇಕಿದೆ. ಮೃತ ಅರ್ಚನಾ ಪಾಲಕರಿಗೆ ಮಾಹಿತಿ ನೀಡಿದ್ದು, ಅವರು ಬಂದ ಬಳಿಕ ದೂರು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts