ಬೆಳಗಾವಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ; ಇಬ್ಬರಿಗೆ ಗಾಯ

IMG-20230530-WA0001.jpg
Published on


ಬೆಳಗಾವಿ: ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬಳಿ ಕೃಷಿ ಜಮೀನನಲ್ಲಿ ತರಬೇತಿ ವಿಮಾನವೊಂದು ತಾಂತ್ರಿಕ ಸಮಸ್ಯೆ ದಿಂದಾಗಿ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ನಗರದ  ಸಾಂಬ್ರಾ ವಿಮಾನ ನಿಲ್ದಾಣದಿಂದ ತರಬೇತುದಾರ ವಿಮಾನವು ಟೇಕಾಫ್ ಆಗಿದ್ದು, ಕೆಲವು ನಿಮಿಷಗಳ ನಂತರ ತಾಂತ್ರಿಕ ದೋಷ ಕಂಡು ಬಂದ ನಂತರ ಅದನ್ನು ಮೈದಾನಕ್ಕೆ ಇಳಿಸಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಾಂಬ್ರಾ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಪಷ್ಟನೆ  ನೀಡಿದ್ದಾರೆ.  ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು.ಪೊಲೀಸರು ಮತ್ತು ಭಾರತೀಯ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net