ತೆಲುಗು ಸಿನಿಮಾಗೆ ಗ್ರೀನ್‌ ಸಿಗ್ನಲ್‌ ನೀಡಿದ ಬಾಲಿವುಡ್ ನಟಿ ಐಶ್ವರ್ಯ ರೈ, ಚಿರಂಜೀವಿ ಅವರಿಗೆ ನಾಯಕಿಯಾಗಲಿದ್ದಾರಾ?

asssshhh
Published on

ಸಿನಿಮಾ ಆಯ್ಕೆ ವಿಚಾರದಲ್ಲಿ ನಟಿಯರು ತುಂಬಾನೆ ಯೋಚನೆ ಮಾಡ್ತಾರೆ. ಐಶ್ವರ್ಯಾ ರೈ ಸಹ ಸಿನಿಮಾಗಳ ಆಯ್ಕೆಯ ವಿಷಯದಲ್ಲಿ ನಾನು ತುಂಬಾ ಚ್ಯೂಸಿಯಾಗಿದ್ದೇನೆ ಎಂದು ಸಾಕಷ್ಟು ಭಾರೀ ಹೇಳಿಕೊಂಡಿದ್ದಾರೆ. ಅಂದರೇ ಸಿಕ್ಕ ಸಿಕ್ಕ ಸಿನಿಮಾಗಳಿಗೆ ಒಪ್ಪಿಕೊಳ್ಳುವುದಿಲ್ಲ.


ಇತ್ತೀಚೆಗಷ್ಟೇ ತೆರೆಕಂಡಿರುವ ಮಣಿರತ್ನಂ ನಿರ್ದೇಶನದಡಿಯಲ್ಲಿ ಮೂಡಿಬಂದ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ನಟಿಸಿ ಎಲ್ಲರ ಗಮನಸೆಳೆದಿದ್ದರು. ಇದೀಗ ತೆಲುಗಿನ ಚಿತ್ರವನ್ನು ಒಪ್ಪಿಕೊಂಡಿದ್ದು, ಚಿತ್ರದಲ್ಲಿ ಚಿರಂಜೀವಿ ಅವರಿಗೆ ನಾಯಕಿಯಾಗಲಿದ್ದಾರಂತೆ.


ಅಜಿತ್‌ ನಟನೆಯ ವಾರಿಸು ಸಿನಿಮಾ ಭಾಕ್ಸಾಫೀಸ್‌ನಲ್ಲಿ ಅಬ್ಬರಿಸಿದ ಬೆನ್ನಲ್ಲೇ ಈ ಅವರ ಹೊಸ ಸಿನಿಮಾ ಅನೌನ್ಸ್‌ ಆಗಿತ್ತು, ಅದೇ ಸಿನಿಮಾದಲ್ಲಿ ಐಶ್ವರ್ಯ ರೈ ನಾಯಕಿಯಾಗಿ ನಟಿಸಲಿದ್ದಾರೆ ಎನ್ನುವ ಸುದ್ದಿಯೂ ಇತ್ತು.


ದಕ್ಷಿಣ ಭಾರತದ ಸಿನಿಮಾಗಳ ಘನತೆಯನ್ನು ಎತ್ತಿಹಿಡಿಯುತ್ತಾ ಬಂದಿರುವ ಐಶ್ವರ್ಯಾ ರೈ ಈ ಹಿಂದೆ ತಮಿಳು ಚಿತ್ರಕ್ಕೆ ಸಹಿ ಮಾಡಿದ್ದರು ಎಂದು ಹೇಳಲಾಗಿತ್ತು. ಅಜಿತ್‌ ಕುಮಾರ್‌ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ವರದಿ ಮಾಡಲಾಗಿತ್ತು.


ಐಶ್ವರ್ಯಾ ರೈ ಈ ಹಿಂದೆ ತಮಿಳು ಚಿತ್ರಕ್ಕೆ ಸಹಿ ಮಾಡಿದ್ದರು, ಇದೀಗ ತೆಲುಗಿನ ಚಿತ್ರವನ್ನು ಒಪ್ಪಿಕೊಂಡಿದ್ದು, ಚಿತ್ರದಲ್ಲಿ ಚಿರಂಜೀವಿ ಅವರಿಗೆ ನಾಯಕಿಯಾಗಲಿದ್ದಾರಂತೆ ಐಶ್ವರ್ಯ ರೈ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net