ಅಜನೀಶ್ ಲೋಕನಾಥ್ ಕಿಡ್ನಾಪ್​ … ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್​

Hostel Hudugaru Bekagiddare 10 - Final
Published on

ಬೆಂಗಳೂರು: ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಕಿಡ್ನಾಪ್​ ಆಗಿದ್ದಾರೆ. ಅವರನ್ನು ಥಳಿಸಿ, ಕೈ ಕಟ್ಟಲಾಗಿದೆ. ಅಜನೀಶ್​ ದೈನೇಸಿಯಾಗಿ ನಿಂತಿದ್ದು, ಅವರ ಜತೆಗೆ ಒಂದಿಷ್ಟು ಉಗ್ರರು ನಿಂತಿದ್ದಾರೆ. ಈ ಫೋಟೋ ಈಗ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ಇದನ್ನು ನೋಡಿ, ಅಜನೀಶ್​ ಲೋಕನಾಥ್ ಕಿಡ್ನ್ಯಪ್ ಆದರಾ? ಎಂಬ ಆತಂಕ ಅವರ ಅಭಿಮಾನಿಗಳಲ್ಲಿ ಹೆಚ್ಚಿದೆ.

ಇಲ್ಲ, ಅಜನೀಶ್​ ನಿಜಕ್ಕೂ ಕಿಡ್ನಾಪ್​ ಆಗಿಲ್ಲ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಮೋಷನ್ ಫೋಟೋ ಇದು. ಆರಂಭದಿಂದಲೂ ಚಿತ್ರದ ಪ್ರಚಾರವನ್ನು ವಿಭಿನ್ನವಾಗಿ ಮಾಡುತ್ತಾ ಬಂದಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದವರು, ಈಗ ಅಂಥದ್ದೇ ಇನ್ನೊಂದು ಪ್ರಯತ್ನ ಮಾಡಿದ್ದಾರೆ.

ಇದಕ್ಕೂ ಮುನ್ನ ರಮ್ಯಾ ಕೂಡ ಚಿತ್ರದ ಪ್ರಚಾರ ಮಾಡಿದ ಟೀಸರ್​ ವೈರಲ್​ ಆಗಿತ್ತು. ಅದಕ್ಕೂ ಮುನ್ನ ಪುನೀತ್ ರಾಜಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್ ಸಹ ಚಿತ್ರದ ಪ್ರಚಾರದಲ್ಲಿ ಕೈಜೋಡಿಸಿದ್ದರು. ಆ ಸಾಲಿಗೆ ಅಜನೀಶ್ ಲೋಕನಾಥ್ ಸೇರ್ಪಡೆಯಾಗಿದ್ದು, ಅವು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಇತ್ತೀಚೆಗೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಜನೀಶ್​ ಕಿಡ್ನಾಪ್​ ಆಗಿದ್ದಾರೆ ಎಂಬಂತೆ ಪ್ರಚಾರ ಮಾಡಲಾಗಿದೆ.

ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್' ಬ್ಯಾನರ್ನಡಿ ನಿರ್ಮಾಣವಾಗಿರುವ ಮೊದಲ ಚಿತ್ರವಾದ 'ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ' ಮುಗಿದು, ಇದೀಗ ಬಿಡುಗಡೆಗೆ ಸಜ್ಜಾಗುತ್ತಿದೆ. ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ‘ಹಲವು ರಂಗಭೂಮಿ ಪ್ರತಿಭೆಗಳು ನಟಿಸಿದ್ದು, ಅವರ ಜತೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಜನವರಿಯಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net