

ನವದೆಹಲಿ: ಕೇರಳದ ಮಾಜಿ ಮುಖ್ಯಮಂತ್ರಿ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟನಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿಷೇಧವಿದ್ದರೂ ಕೇರಳ ಕಾಂಗ್ರೆಸ್‌ನ ವಿವಿಧ ಘಟಕಗಳು ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಘೋಷಿಸಿವೆ. ಇದರ ನಡುವೆಯೇ ಆಂಟನಿ ಪುತ್ರ ರಾಜೀನಾಮೆ ನೀಡಿರುವುದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
2002ರಲ್ಲಿ ಗುಜರಾತ್ನಲ್ಲಿ ಗೋಧ್ರಾ ಹತ್ಯಾಕಾಂಡದ ನಂತರ ರಾಜ್ಯಾದ್ಯಂತ ನಡೆದ ಹಿಂಸಾಚಾರ ಕುರಿತ 59 ನಿಮಿಷದ ಡಾಕ್ಯುಮೆಂಟರಿ ದೇಶದಲ್ಲಿ ವಿವಾದದ ಕಿಡಿಹೊತ್ತಿಸಿದೆ. ಗೋಧ್ರಾ ಹತ್ಯಾಕಾಂಡದ ವೇಳೆ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪಾತ್ರದತ್ತ ಈ ಡಾಕ್ಯುಮೆಂಟರಿ ಬೆರಳು ಮಾಡಿದೆ. ಈ ಸಾಕ್ಷ್ಯಚಿತ್ರವನ್ನ ಆ್ಯಂಟನಿ ಅವರ ಪುತ್ರ ಅನಿಲ್ ನಿನ್ನೆ(ಮಂಗಳವಾರ) ವಿರೋಧಿಸಿದ್ದರು. ಮರುದಿನವೇ ಕಾಂಗ್ರೆಸ್ ಪಕ್ಷಕ್ಕೆ ಅನಿಲ್ ರಾಜೀನಾಮೆ ನೀಡಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
'ನಾನು ಕಾಂಗ್ರೆಸ್ನಲ್ಲಿ ನಾನು ವಹಿಸಿಕೊಂಡಿದ್ದ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ. ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರವನ್ನ ವಿರೋಧಿಸಿ ಬಿಜೆಪಿ ಪರ ನಾನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದೆ. ಇದನ್ನು ಡಿಲೀಟ್ ಮಾಡುವಂತೆ ಕಾಂಗ್ರೆಸ್ ನನಗೆ ಹೇಳಿದರು. ಇದನ್ನು ನಾನು ನಿರಾಕರಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲವೇ? ಇದೇ ಕಾರಣಕ್ಕೆ ನಾನು ಕಾಂಗ್ರೆಸ್‌ನ ನನ್ನೆಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ' ಎಂದು ಟ್ವೀಟ್ ಮಾಡಿದ್ದಾರೆ.
ವಿವಾದಾತ್ಮಕ ಡಾಕ್ಯುಮೆಂಟರಿ ‘ದಿ ಮೋದಿ ಕ್ವೆಶ್ಚನ್’ನ ಲಿಂಕ್ಗಳನ್ನು ಕೇಂದ್ರ ಸರ್ಕಾರ ಬ್ಲಾಕ್ ಮಾಡಿ, ಭಾರತದಲ್ಲಿ ಇದರ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ.