More

    ‘ಆಕಾಶ ಚಿಗುರಿ ಭೂಮಿ ತಂಪಾದೀತಲೇ ಪರಾಕ್’

    ಗುತ್ತಲ: ‘ಆಕಾಶ ಚಿಗುರಿ ಭೂಮಿ ತಂಪಾದೀತಲೇ ಪರಾಕ್’ ಇದು ಹಾವನೂರ (ಚಿಕ್ಕ ಮೈಲಾರ) ಸಮೀಪದ ಜೋಗ ಮರಡಿಯಲ್ಲಿ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಗೊರವಪ್ಪ ಆನಂದ ಬಿಲ್ಲರ ಭಾನುವಾರ ಸಂಜೆ ಹೇಳಿದರು.

    ಕಳೆದ 358 ವರ್ಷಗಳಿಂದ ಹಾವನೂರ ಗ್ರಾಮದಲ್ಲಿನ ಚಿಕ್ಕಮೈಲಾರದ ಕಾರ್ಣಿಕೋತ್ಸವವು ಮೈಲಾರದ ಡೆಂಕನ ಮರಡಿಯಲ್ಲಿ ನುಡಿಯುವ ಕಾರ್ಣಿಕ ದಿನದ ಹಿಂದಿನ ದಿನ (ಭರತ ಹುಣ್ಣಿಮೆಯ ಮರುದಿನ) ಇಲ್ಲಿ ಕಾರ್ಣಿಕವನ್ನು ಹೇಳುತ್ತ ಬರಲಾಗಿದೆ.

    ಭಾನುವಾರ ಸಂಜೆ ಸಾಂಪ್ರದಾಯಿಕ ಪೂಜೆಗಳ ನಂತರ ಮೈಲಾರಲಿಂಗೇಶ್ವರನನ್ನು ಮೆರವಣಿಗೆಯಲ್ಲಿ ತರಲಾಯಿತು. ನಂತರ ಚಿಕ್ಕ ಮೈಲಾರದಿಂದ ಗಂಗಮಾಳವ್ವ ಮೂರ್ತಿಗಳ ಆಗಮನದ ನಂತರ ಗೊರವಪ್ಪನು 15-20 ಅಡಿ ಎತ್ತರದ ಬಿಲ್ಲನ್ನು ಏರಿ ಕಾರ್ಣಿಕದ ನುಡಿ ಹೇಳಲು ಬಿಲ್ಲನೇರಿ ಸದ್ದಲೇ ಎನ್ನತ್ತಲೇ ಆಗಮಿಸಿದ್ದ ಸಾವಿರಾರು ಭಕ್ತರು ಮೌನವಾದರು. ನಂತರ ‘ಆಕಾಶ ಚಿಗುರಿ ಭೂಮಿ ತಂಪಾದೀತಲೇ ಪರಾಕ್’ ಎಂದು ಕಾರ್ಣಿಕ ಹೇಳಿ ಮೇಲಿಂದ ಗೊರವಪ್ಪ ಪಶ್ಚಿಮ ದಿಕ್ಕಿನ ಕಡೆ ತಲೆ ಮಾಡಿ ಬಿದ್ದರು.

    ಈ ಬಾರಿಯ ಭವಿಷ್ಯವು ಅನೇಕ ರೀತಿಯಲ್ಲಿ ಅರ್ಥೈಸಲಾಗಿದೆ. ಪ್ರಸ್ತಕ ವರ್ಷದ ಮುಂಗಾರು ಹಾಗೂ ಹಿಂಗಾರು ಮಳೆ ಉತ್ತಮವಾಗಿ ಆಗುವುದು. ಇದರಿಂದ ಭೂಮಿಯೂ ತಂಪಾಗುವುದೆಂದು ಅರ್ಥೈಸಲಾಗಿದೆ.

    ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ ರಾಜಕೀಯವಾಗಿ ಹೆಚ್ಚು ಅರ್ಥವನ್ನು ಕಲ್ಪಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

    ಮೈಲಾರಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ಕೃಷ್ಣಭಟ್ ಪೂಜಾರ, ವಿಲಾಸ ಜೋಗ, ನಾರಾಯಣಪ್ಪ ಕಮ್ಮಾರ, ದೇವರಾಜ ಮೈಲಾರ, ಅಶೋಕ ಮೈಲಾರ, ಗ್ರಾಪಂ ಸದಸ್ಯರಾದ ಮಾಲತೇಶ ಉದಗಟ್ಟಿ, ದಿಳ್ಳೆಪ್ಪ ಗೊಣ್ಣಿ, ಗೋಪಾಲ ಗೊಣ್ಣಿ, ಸುನೀಲ ಕೆಂಗನಿಂಗಪ್ಪನವರ, ಜಯಪ್ಪ ಪೂಜಾರ ಸೇರಿದಂತೆ ಗ್ರಾಪಂ ಸದಸ್ಯರು, ಹಾವನೂರ ಸೇರಿದಂತೆ ಗುತ್ತಲ, ಹರಳಹಳ್ಳಿ, ಹುರುಳಿಹಾಳ ಗ್ರಾಮಗಳಿಂದ ಸಾವಿರಾರು ಜನರು ಆಗಮಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts