More

    ಮುಂಚೂಣಿ ಕೆಲಸಗಾರರಿಗೆ ಸೌಲಭ್ಯಗಳನ್ನು ವಿತರಿಸಿ

    ಪಿರಿಯಾಪಟ್ಟಣ: ಕೋವಿಡ್-19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಲ್ಲ ಕಾರ್ಮಿಕರಿಗೂ ಸುರಕ್ಷತೆಗಾಗಿ ಪಿಪಿಇ ಕಿಟ್‌ಗಳನ್ನು ವಿತರಿಸುವಂತೆ ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲೀಲಾವತಿ ಆಗ್ರಹಿಸಿದ್ದಾರೆ.
    ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದರು. ಕರೊನಾ ವೈರಸ್ ಹರಡದಂತೆ ತಡೆಯಲು ಹಾಗೂ ಕೋವಿಡ್-19 ಸೋಂಕಿತರ ಸಮೀಕ್ಷೆಗೆ ಹಾಗೂ ಶಂಕಿತರ ಉಸ್ತುವಾರಿಗೆ ನೋಡಿಕೊಳ್ಳಲು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಕ್ಷರ ದಾಸೋಹ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಅವರ ಸುರಕ್ಷತೆಗಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ದೇಶದ ಹಲವೆಡೆ ಯೋಜನಾ ಕಾರ್ಮಿಕರು ಸೋಂಕಿಗೆ ತುತ್ತಾಗಿರುವುದು ವರದಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಈ ಅಪಾಯದ ಕೆಲಸಕ್ಕೆ ತಮ್ಮ ಜೀವದ ಹಂಗನ್ನು ತೊರೆದು ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅರೆ ವೈದ್ಯಕೀಯ ಸಿಬ್ಬಂದಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆರೋಗ್ಯ ಸ್ವಯಂಸೇವಕರು, ಪ್ರಯೋಗಾಲಯ ತಂತ್ರಜ್ಞರು, ಔಷಧ ವಿತರಕರು, ತುರ್ತುವಾಹನ ಚಾಲಕರು, ನೈರ್ಮಲ್ಯೀಕರಣ ಸಿಬ್ಬಂದಿಗಳು ಸೇರಿದಂತೆ ವಿವಿಧ ವರ್ಗದ ಕಾರ್ಮಿಕರು ಸೂಕ್ತ ಆಹಾರ ಮತ್ತು ವಿರಾಮವಿಲ್ಲದೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.
    ಸಿಬ್ಬಂದಿಗಳ ಸುರಕ್ಷತೆಗಾಗಿ ಕೂಡಲೇ ಪಿಪಿಇ ಕಿಟ್‌ಗಳನ್ನು ವಿತರಿಸಬೇಕು, ಎಲ್ಲರಿಗೂ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಿಸಬೇಕು, ಕರ್ತವ್ಯದಲ್ಲಿದ್ದಾಗ ಮರಣ ಹೊಂದುವ ನೌಕರರಿಗೆ 50 ಲಕ್ಷ ರೂ. ವಿಮೆ ಮಾಡಬೇಕು, ಕೋವಿಡ್-19 ಕರ್ತವ್ಯದಲ್ಲಿರುವ ಎಲ್ಲ ಎನ್‌ಎಚ್‌ಎಂ ನೌಕರರಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 25000 ಪ್ರೋತ್ಸಾಹಧನ ನೀಡಬೇಕು, ಉಚಿತ ಪಡಿತರ ನೀಡಬೇಕು ಎಂದು ಒತ್ತಾಯಿಸಿದರು.
    ಅಕ್ಷರ ದಾಸೋಹ ನೌಕರ ಸಂಘದ ಕಾರ್ಯದರ್ಶಿ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾ ಪದಾಧಿಕಾರಿ ಕೆ.ಪಿ.ಕಾವೇರಮ್ಮ, ಎಸ್.ಎ.ರಾಣಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts