

ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ಅಧ್ಯಕ್ಷ ಎಸ್.ರಘುನಾಥ್ ಅವರು ಪುತ್ತೂರು ಕಜೆ ಲಾ ಛೇಂಬರ್‍ಸ್ ಮುಖ್ಯಸ್ಥ ಮಹೇಶ್ ಕಜೆ ಮನೆಗೆ ಭೇಟಿ ನೀಡಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಎಸ್. ಮಾತನಾಡಿ, ಮಹಾಸಭಾಕ್ಕೆ ಕಳೆದ ೫ ತಿಂಗಳಿನಲ್ಲಿ ೧೧ ಸಾವಿರ ಸದಸ್ಯತನ ಮಾಡಿದ್ದೇವೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಕ್ಕೆ ಆರ್ಥಿಕ ಸದೃಢತೆ ತರಬೇಕೆಂಬ ಉದ್ದೇಶ ಇದೆ. ಎಲ್ಲ ಬ್ರಾಹ್ಮಣರಿಗೂ ಮಹಾಸಭಾದಿಂದ ಸಹಾಯ ಸಿಗಬೇಕು ಎಂದರು.
ದ್ವಾರಕ ಕನ್‌ಸ್ಟ್ರಕ್ಷನ್ಸ್‌ನ ಜಿ.ಕೆ.ಭಟ್, ಕೂಟ ಮಹಾಜಗತ್ತು ಕಾರ್ಯದರ್ಶಿ ಸೂರ್ಯನಾರಾಯಣ, ವಿಶ್ವ ಹಿಂದು ಪರಿಷತ್ ಮಠ ಮಂದಿರ ಅರ್ಚಕ ಮಂಗಳೂರು ಜಿಲ್ಲಾ ವಿಭಾಗ ಪ್ರಮುಖ್ ಪೊಳಲಿ ಗಿರಿಪ್ರಕಾಶ್ ತಂತ್ರಿ, ಪುತ್ತೂರು ಶಿವಳ್ಳಿ ಸಂಪದ ಅಧ್ಯಕ್ಷ ಸುಧೀಂದ್ರ ಕುದ್ದಣ್ಣಾಯ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕಡಂಬಳಿತ್ತಾಯ, ಹವ್ಯಕ ಅಧ್ಯಕ್ಷ ವೆಂಕಟಕೃಷ್ಣ ದರ್ಬೆ, ಕರಾಡ ಬ್ರಾಹ್ಮಣ ಅಸೋಸಿಯೇಶನ್‌ನ ರಾಮಚಂದ್ರ ಭಟ್, ಉದ್ಯಮಿಗಳಾದ ಗೋಪಾಲಕೃಷ್ಣ ಹೇರಳೆ, ಉಮೇಶ್ ಶಾಸ್ತ್ರಿ ಬೆಂಗಳೂರು, ನರಸಿಂಹ ರಾವ್, ಕೂಟ ಮಹಾಜಗತ್ತು ಪುತ್ತೂರು ಅಧ್ಯಕ್ಷ ಸದಾಶಿವ ಹೊಳ್ಳ, ಅಖಿಲ ಹವ್ಯಕ ಮಹಾಸಭಾದ ನಿರ್ದೇಶಕ ಶಿವಶಂಕರ್ ಭಟ್ ಬೋನಂತಾಯ, ಮುಳಿಯ ಜ್ಯುವೆಲ್ಲರ್ಸ್‌ನ ಸಿಎಂಡಿ ಕೇಶವಪ್ರಸಾದ್ ಮುಳಿಯ, ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೆಂಗಳೂರು ಜಿಲ್ಲಾ ಪ್ರತಿನಿಧಿ ರಾಜಶೇಖರ, ಆರ್.ಡಿ.ಶಾಸ್ತ್ರಿ, ವಿವಿಧ ಬ್ರಾಹ್ಮಣ ಪಂಗಡಗಳ ಪ್ರಮುಖರು ಉಪಸ್ಥಿತರಿದ್ದರು.
ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ
ಎಸ್.ರಘುನಾಥ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಾಸಕ ಅಶೋಕ್ ಕುಮಾರ್ ರೈ, ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರೊಂದಿಗೆ ದೇವಳದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.