ಅಖಂಡ ಭಜನಾ ಸಪ್ತಾಹ ಮುಕ್ತಾಯ

gan (2)
Published on

ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶ ವಿದ್ಯಾಧೀಶ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಅಖಂಡ ಭಜನಾ ಸಪ್ತಾಹ ಮಹೋತ್ಸವ ಬುಧವಾರ ಮುಕ್ತಾಯಗೊಂಡಿತು. ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ಪುರೋಹಿತ ಜಿ.ಅನಂತಕಷ್ಣ ಭಟ್ ನೇತೃತ್ವದಲ್ಲಿ ದೀಪ ವಿಸರ್ಜನೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ದೇವರಿಗೆ ಪಂಚಭಕ್ಷ ನೈವೇದ್ಯ, ಮಹಾಪೂಜೆ, ಮಹಾಸಮಾರಾಧನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಆಡಳಿತ ಮಂಡಳಿ ಸದಸ್ಯರು, ಭಕ್ತರು ಹಾಗೂ 60ಕ್ಕೂ ಅಧಿಕ ಭಜನಾ ತಂಡಗಳು ಪಾಲ್ಗೊಂಡಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net