More

  ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಅಖಿಲೇಶ್ ಸಾಥ್​

  ಆಗ್ರಾ(ಉತ್ತರ ಪ್ರದೇಶ): ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಮತ್ತು ಸಮಾಜವಾದಿ ಪಕ್ಷ ಸೀಟು ಹಂಚಿಕೆ ಮಾಡಿಕೊಂಡ ನಂತರ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಪಾಲ್ಗೊಂಡರು.

  ಇದನ್ನೂ ಓದಿ: ಹಲ್ದ್ವಾನಿ ಹಿಂಸಾಚಾರ: 10 ದಿನ ಪೊಲೀಸ್ ಕಸ್ಟಡಿಗೆ ಮಾಸ್ಟರ್​ ಮೈಂಡ್​ ಅಬ್ದುಲ್ ಮಲಿಕ್‌

  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಬ್ಬರು ನಾಯಕರು ಯಾತ್ರೆಯಲ್ಲಿ ನೆರೆದಿದ್ದ ಜನಸಮೂಹದತ್ತ ಕೈಬೀಸುತ್ತಿದ್ದಂತೆ ಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದರು.

  ಈ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್​, ‘ರೈತರು ಸರ್ಕಾರದ ವಿರುದ್ಧ ನಿಂತಿದ್ದಾರೆ, ಸರ್ಕಾರ ರೈತರ ಶಕ್ತಿಗೆ ಹೆದರುತ್ತಿದೆ. ಬಿಜೆಪಿಯನ್ನು ಈ ಬಾರಿ ಸೋಲಿಸಲಾಗುವುದು, ಅಷ್ಟೇ ಅಲ್ಲ, ಮುಂದೆ ಬರುವ INDIA ಸಮ್ಮಿಶ್ರ ಸರ್ಕಾರವು ರೈತರಿಗೆ ಗೌರವವನ್ನು ನೀಡುತ್ತದೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಬೇಕಾದ ಗೌರವವನ್ನು ಬಿಜೆಪಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

  ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಪ್ರದೀಪ್ ಮಾಥೂರ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಆಗ್ರಾದ ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

  ‘ಸ್ಕೂಲ್​ ಮಕ್ಕಳಿಗೆ ಲೈಂಗಿಕ ಸಂಭೋಗ ನಿಷೇಧಿಸಿ’: ಪರೀಕ್ಷೆ ಬದಲು ಡೇಟಿಂಗ್ ವಿರೋಧಿ ಮಸೂದೆಗೆ ಪ್ರತಿಕ್ರಿಯಿಸಿ ಕಂಗನಾ ಮಾಡಿದ್ದೇನು?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts