More

    ಮೈಸೂರಲ್ಲೂ ಅಕ್ರಮ-ಸಕ್ರಮಕ್ಕೆ ಅನುಮತಿ ಸಾಧ್ಯತೆ

    ಮೈಸೂರು: ಕೋವಿಡ್​ ಲಾಕ್​ಡೌನ್​ನಿಂದಾಗಿ ಆದಾಯದಲ್ಲಿ ಭಾರಿ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರ ವಿವಿಧ ಮೂಲಗಳಿಂದ ಆದಾಯ ಕ್ರೋಢಿಕರಣಕ್ಕಾಗಿ ಹರಸಾಹಸ ಪಡುತ್ತಿದೆ. ಇದಕ್ಕಾಗಿ ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದ್ದು, ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ. ಇನ್ನೂ ಹೆಚ್ಚಿನ ಆದಾಯ ಕ್ರೋಢಿಕರಣಕ್ಕಾಗಿ ಅದು ಈಗ ಮೈಸೂರು ನಗರದಲ್ಲೂ ಅಕ್ರಮ-ಸಕ್ರಮ ಯೋಜನೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ.

    ಕರೋನಾ ಹಿನ್ನೆಲೆಯಲ್ಲಿ ಗುರುವಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​, ಈ ಬಗ್ಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಜತೆ ಚರ್ಚಿಸಿ, ನಿರ್ಧರಿಸುವುದಾಗಿ ಹೇಳಿದ್ದಾರೆ.

    ಇದನ್ನೂ ಓದಿ: VIDEO| ಕೆಎಂಎಫ್ ಗೆ ರೈತರು ಪೂರೈಸುವ ಹಾಲಿಗೆ ರಾಜ್ಯಾದ್ಯಂತ ಶೀಘ್ರ ಏಕರೂಪದ ದರ: ಬಾಲಚಂದ್ರ ಜಾರಕಿಹೊಳಿ

    ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು. ಕರೊನಾದಿಂದಾಗಿ ಮೈಸೂರು ಮಹಾನಗರ ಪಾಲಿಕೆಯೂ ಸಮಸ್ಯೆ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಕಳೆದ 3 ತಿಂಗಳಿಂದ ನೂರಾರು ಕೋಟಿ ರೂ. ಹೆಚ್ಚಿನ ಆದಾಯ ಖೋತಾ ಆಗಿದೆ. ಎಲ್ಲ ನಗರ ಪಾಲಿಕೆಗಳೂ ಅನುದಾನ ಕೊಡಬೇಕು ಎಂಬ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಅವರೂ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

    ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಮುಡಾ ಪ್ರದೇಶದಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಂಡ್ಯ ಜಿಲ್ಲಾಧಿಕಾರಿ ಬಳಿ ಚರ್ಚಿಸಿದ್ದೇನೆ. ಮೈಸೂರು ಜಿಲ್ಲಾಧಿಕಾರಿಯನ್ನೂ ಕರೆಸಿ ಸಭೆ ಮಾಡಿ ಸಮಸ್ಯೆ ಪರಿಹರಿಸಲಾಗುವುದು. ಸದ್ಯಕ್ಕೆ ಸರ್ಕಾರಿ ಜಮೀನನ್ನು ಇದಕ್ಕೆ ಮಂಜೂರು ಮಾಡಿದ ಬಗ್ಗೆ ದಾಖಲೆ ಕೊಟ್ಟರೆ ಕಾಮಗಾರಿ ಪ್ರಾರಂಭವಾಗುವಂತೆ ನೋಡಿಕೊಳ್ಳಲಾಗುವುದು. ಒಟ್ಟಾರೆ ಜನರ ನೀರಿನ ಸಮಸ್ಯೆ ನೀಗಬೇಕಷ್ಟೇ ಎಂದು ಹೇಳಿದರು.

    ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ. ದೇವೇಗೌಡ, ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಮೇಯರ್ ತಸ್ನಿಂ ಮತ್ತಿತರರು ಇದ್ದರು.

    ಮದುವೆಗೆ ಕೂಡಿಟ್ಟ 1 ಲಕ್ಷ ರೂ. ಹಣ ಕೋವಿಡ್​ ನಿಧಿಗೆ ದಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts