ಅಕ್ಷರ ಜಾತ್ರೆ 2019| ಸಾಹಿತ್ಯ ಸಮ್ಮೆಳನದ ಧ್ವಜಾರೋಹಣ

ಧಾರವಾಡ: ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಿತು.

ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ರಾಷ್ಟ್ರಧ್ವಜವನ್ನು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮನು ಬಳಿಗಾರ್ ಅವರು ಪರಿಷತ್ತಿನ ಧ್ವಜವನ್ನು, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ ಅವರು ನಾಡಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧಿಕಾರಿ ದೀಪಾ ಚೋಳನ್, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಶಕೀಲ್ ಅಹ್ಮದ್, ಇತರರು ಉಪಸ್ಥಿತಿ ಇದ್ದರು.

ಈ ವೇಳೆ ಮಾತನಾಡಿದ ಸಚಿವ ಆರ್.ವಿ‌. ದೇಶಪಾಂಡೆ, ಮೂರು ದಿನಗಳ ಕಾಲ‌ ಕನ್ನಡ ಸಾಹಿತ್ಯ‌ ಸಮ್ಮೇಳನ ವಿಜ್ರಂಭಣೆಯಿಂದ ನಡೆಯಲಿದೆ. ಸಾಹಿತ್ಯಾಸಕ್ತರು ಸಮ್ಮೇಳನವನ್ನು ಯಶಸ್ವಿಗೊಳಿಸಲಿ. ಎಲ್ಲರೂ ನಗುನಗುತ್ತಾ ಬಂದು‌ ಸಮ್ಮೇಳನದಲ್ಲಿ ಭಾಗವಹಿಸಿ ನಗುನಗುತ್ತಾ ಹೋಗಲಿ. ಕನ್ನಡ‌ ಸಾಹಿತ್ಯ ಸಮ್ಮೇಳನ ನಮಗೆಲ್ಲ ಹೆಮ್ಮೆಯ ಪ್ರತೀಕ ಎಂದರು.