22.8 C
Bengaluru
Saturday, January 18, 2020

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡುತ್ತಾರೆ. ಕೆಲದಿನಗಳಿಂದ ಗಗನಮುಖಿಯಾಗಿ ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿರುವ ಈರುಳ್ಳಿ ಕೂಡ ಅದರಿಂದ ಹೊರತಾಗಿಲ್ಲ ಎಂಬುದಕ್ಕೆ ಟ್ವಿಂಕಲ್​ ಖನ್ನಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಫೋಟೋ ಸಾಕ್ಷಿಯಾಗಿದೆ.

ಇತ್ತೀಚೆಗಷ್ಟೇ ಟ್ವಿಂಕಲ್​ ಖನ್ನಾ ಈರುಳ್ಳಿಯಿಂದ ಮಾಡಲ್ಪಟ್ಟಿರುವ ಕಿವಿಯೋಲೆಯ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಪತಿ ಅಕ್ಷಯ್​ ಕುಮಾರ್​ ಇತ್ತೀಚೆಗೆ ತಮ್ಮ ನೂತನ ಗುಡ್​ ನ್ಯೂಸ್​(Good Newwz) ಚಿತ್ರದ ಪ್ರಚಾರಕ್ಕಾಗಿ ಕಪಿಲ್​ ಶರ್ಮಾ ಶೋನಲ್ಲಿ ಭಾಗವಹಿಸಿದ್ದರು. ಈ ವೇಳೆ ನಟಿ ಕರೀನಾ ಕಪೂರ್​ ಕೂಡ ಸಾಥ್​ ನೀಡಿದ್ದರು. ಕಾರ್ಯಕ್ರಮದಲ್ಲಿ ಕರೀನಾಗೆ ಒಂದು ಜೊತೆ ಈರುಳ್ಳಿ ಕಿವಿಯೋಲೆಯನ್ನು ನೀಡಲಾಗಿತ್ತು. ದೇಶದಲ್ಲಿ ಈರುಳ್ಳಿ ಗಗನಮುಖಿಯಾಗಿರುವ ಹಿನ್ನೆಲೆಯಲ್ಲಿ ಹಾಸ್ಯದ ದೃಷ್ಟಿಯಿಂದ ಕಿವಿಯೋಲೆಯನ್ನು ಕರೀನಾಗೆ ನೀಡಲಾಗಿತ್ತು.

ಕರೀನಾಗೆ ನೀಡಿದ್ದ ಈರುಳ್ಳಿ ಕಿವಿಯೋಲೆಯನ್ನು ಬಳಿಕ ನಟ ಅಕ್ಷಯ್ ತಮ್ಮ ಮಡದಿ ಟ್ವಿಂಕಲ್​ ಖನ್ನಾಗೆ ತಂದುಕೊಟ್ಟಿದ್ದಾರೆ. ಈ ಚಿತ್ರವನ್ನು ಇನ್​​ಸ್ಟಾಗ್ರಾಂನಲ್ಲಿ ಶೇರ್​ ಮಾಡಿ, ಕಪಿಲ್​ ಶರ್ಮಾ ಶೋ ಬಳಿಕ ನನ್ನ ಪತಿ ಬಳಿಬಂದು ಇದರಿಂದ ಕರೀನಾ ಪ್ರಭಾವಿತರಾಗಲಿಲ್ಲ. ನೀನಾದರೂ ಇದನ್ನು ಖಂಡಿತವಾಗಿಯೂ ಎಂಜಾಯ್​ ಮಾಡುತ್ತೀಯ ಅನಿಸಿತು. ಹೀಗಾಗಿ ನಿನಗೆ ತಂದೆ ಎಂದರು. ಕೆಲವೊಂದು ಬಾರಿ ಇದು ಸಣ್ಣ ವಸ್ತು ಎನಿಸಬಹುದು. ಇಂತಹ ಸಿಲ್ಲಿ ವಸ್ತುಗಳು ಕೆಲವೊಮ್ಮೆ ನಿಮ್ಮ ಹೃದಯವನ್ನು ಸ್ಪರ್ಶಿಸಬಹುದು ಎಂದು ಟ್ವಿಂಕಲ್​ ಖನ್ನಾ ಬರೆದುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಅಕ್ಷಯ್​ ಕುಮಾರ್​ ಈ ವರ್ಷದ ತಮ್ಮ ಐದನೇ ಚಿತ್ರ “ಗುಡ್​ ನ್ಯೂಸ್​”ನ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಚಿತ್ರದಲ್ಲಿ ಕರೀನಾ ಕಪೂರ್​, ಕೈರಾ ಅಡ್ವಾಣಿ ಮತ್ತು ದಲ್ಜಿತ್​ ದೊಸಾಂಜ್​ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಇದಲ್ಲದೆ ಸೂರ್ಯವಂಶಿ ಚಿತ್ರದಲ್ಲೂ ಅಕ್ಷಯ್​ ಬಿಜಿಯಾಗಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...