18 C
Bangalore
Friday, December 6, 2019

ಭಾನುವಾರ ಬೆಳ್ಳಂಬೆಳಗ್ಗೆ ತಮ್ಮನ್ನು ಭೇಟಿಯಾಗಲು ಬಂದ ಅಭಿಮಾನಿಯನ್ನು ನೋಡಿ ಅಚ್ಚರಿಗೊಂಡ ನಟ ಅಕ್ಷಯ್​ ಕುಮಾರ್​; ಸ್ವಲ್ಪ ವಿಭಿನ್ನ ಕಣ್ರೀ ಈ ಫ್ಯಾನ್​…

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಮುಂಬೈ: ಬಾಲಿವುಡ್​ ನಟ ಅಕ್ಷಯ್​ಕುಮಾರ್​ಗೆ ಭಾನುವಾರ ಮುಂಜಾನೆಯೇ ಒಂದು ಅಚ್ಚರಿ ಕಾದಿತ್ತು. ಅಭಿಮಾನಿಯೋರ್ವ ಅವರನ್ನು ಭೇಟಿಯಾಗಲು ಬಂದಿದ್ದ. ಅದೇನು ಅಭಿಮಾನಿ ಬಂದಿದ್ದೇಕೆ ಅಚ್ಚರಿ? ಸ್ಟಾರ್​ಗಳನ್ನು ನೋಡಲು ಅಭಿಮಾನಿಗಳು ಬರುವುದು ಸಹಜ ಎಂದುಕೊಳ್ಳಬಹುದು. ಆದರೆ ಈ ಅಭಿಮಾನಿ ಸ್ವಲ್ಪ ವಿಭಿನ್ನ.

ಹೀಗೆ ಅಕ್ಷಯ್​ಕುಮಾರ್​ ಅವರನ್ನು ನೋಡಲು ಬಂದವನ ಹೆಸರು ಪ್ರಭಾತ್​. ಬೆನ್ನಿಗೊಂದು ಬ್ಯಾಗ್​ ಹಾಕಿಕೊಂಡು, ಅದಕ್ಕೊಂದು ಭಾರತದ ಧ್ವಜ ಸಿಕ್ಕಿಸಿಕೊಂಡು ತಮ್ಮ ಮನೆ ಎದರು ಬಂದು ನಿಂತವನ ಫೋಟೋ ಹಾಗೂ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಅಕ್ಷಯ್​ ಶೇರ್​ ಮಾಡಿಕೊಂಡಿದ್ದಾರೆ.

ಪ್ರಭಾತ್​ ಅವರು ತಮ್ಮ ನೆಚ್ಚಿನ ನಟನನ್ನು ನೋಡಲೆಂದು ದ್ವಾರಕಾದಿಂದ ಮುಂಬೈಗೆ 900 ಕಿ.ಮೀ.ದೂರವನ್ನು 18 ದಿನಗಳಲ್ಲಿ ನಡೆದುಕೊಂಡೇ ಬಂದಿದ್ದಾರೆ. ಅದರಲ್ಲೂ ಭಾನುವಾರವೇ ಅಕ್ಷಯ್​ಕುಮಾರ್ ಅವರನ್ನು ಭೇಟಿಯಾಗಲು ಪೂರ್ವ ಯೋಜನೆ ಹಾಕಿಕೊಂಡು ಆಗಮಿಸಿದ್ದಾರೆ.

ತಮ್ಮ ಅಭಿಮಾನಿಯ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅಕ್ಷಯ್​ಕುಮಾರ್​, ಪ್ರಭಾತ್​ ಅವರು ದ್ವಾರಕಾ​ದಿಂದ ನಡೆದುಕೊಂಡು ಬಂದಿದ್ದಾರೆ. ಅಲ್ಲದೆ 18 ದಿನಗಳಲ್ಲಿ, ಅದರಲ್ಲೂ ಭಾನುವಾರವೇ ನನ್ನನ್ನು ಭೇಟಿಯಾಗುವ ನಿರ್ದಿಷ್ಟ ಯೋಜನೆ ಹಾಕಿಕೊಂಡು ಆಗಮಿಸಿದ್ದಾರೆ. ಹೀಗೆ ಯುವಜನರು ಅವರವರ ಗುರಿಯ ಬಗ್ಗೆ ಇಷ್ಟೊಂದು ಬದ್ಧತೆ ಹೊಂದಿದ್ದರೆ ಅವರು ಯಶಸ್ಸು ತಲುಪುವುದನ್ನು ಯಾರಿಂದಲೂ ತಡೆಯುವುದೇ ಸಾಧ್ಯವಿಲ್ಲ ಎಂದಿದ್ದಾರೆ.

ಭಾನುವಾರವೇ ಅಕ್ಷಯ್​ಕುಮಾರ್​ ಅವರನ್ನು ಭೇಟಿಯಾಗಬೇಕು ಎಂಬ ಕಾರಣಕ್ಕೆ 900 ಕಿ.ಮೀ.ಯನ್ನು ಕ್ರಮಿಸಲು ಕೆಲವೊಮ್ಮೆ ರಾತ್ರಿಯೂ ಕೂಡ ನಡೆದಿದ್ದೇನೆ ಎಂದು ಆ ಅಭಿಮಾನಿ ಹೇಳಿದ್ದನ್ನು ವಿಡಿಯೋದಲ್ಲಿ ಕೇಳಬಹುದು. ಆಗ ಅಕ್ಷಯ್​ ಕುಮಾರ್​ ಅವರು, ಭಾನುವಾರ ನಾನು ಮನೆಯಲ್ಲೇ ಇರುತ್ತೇನೆ ಎಂದು ನಿಮಗೆ ಗೊತ್ತಿತ್ತಾ ಎಂದು ಕೇಳುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಭಾತ್​, ನನಗೆ ಎಲ್ಲವೂ ಗೊತ್ತು ಸರ್, ಯಾಕೆಂದರೆ ನಾನು ನಿಮ್ಮ ಅಭಿಮಾನಿ ಎನ್ನುತ್ತಾನೆ.

ಅಕ್ಷಯ್​ಕುಮಾರ್ ಅವರು ಪ್ರಭಾತ್​ ಜತೆಗಿನ ಇನ್ನೊಂದು ಫೋಟೋವನ್ನು ಶೇರ್​ ಮಾಡಿಕೊಂಡು, ಹೀಗೆಲ್ಲ ಕಷ್ಟಪಡಬೇಡಿ ಎಂದಿದ್ದಾರೆ. ನನಗೆ ಅಭಿಮಾನಿಗಳನ್ನು ಭೇಟಿಯಾಗುವುದು ಎಂದರೆ ಸಂತೋಷದ ವಿಷಯವೇ ಹೌದು. ನಿಮ್ಮ ಪ್ರೀತಿ, ಅಭಿಮಾನಕ್ಕೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ ಇಂಥದ್ದನ್ನೆಲ್ಲ ಮಾಡಬೇಡಿ. ನಿಮ್ಮ ಜೀವನ ಉತ್ತಮಗೊಳಿಸಿಕೊಳ್ಳಲು ನಿಮ್ಮ ಸಮಯ, ಶಕ್ತಿ, ಸಂಪನ್ಮೂಲಗಳನ್ನು ಉಪಯೋಗಿಸಿಕೊಳ್ಳಿ. ಅದೇ ನನಗೆ ತುಂಬ ಸಂತೋಷವನ್ನು ಉಂಟುಮಾಡುತ್ತದೆ ಎಂದಿದ್ದಾರೆ. ಹಾಗೇ ಪ್ರಭಾತ್​ ಅವರಿಗೂ ಶುಭ ಕೋರಿದ್ದಾರೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...