25.9 C
Bengaluru
Wednesday, January 22, 2020

ಕೆನಡಿಯನ್ ಅಲ್ಲ ನಾನೂ ಭಾರತೀಯ!

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಅಕ್ಷಯ್ ಕುಮಾರ್ ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ದೇಶಭಕ್ತಿ ಸಿನಿಮಾಗಳನ್ನು ಆಯ್ದುಕೊಂಡರು. ಮಾತ್ರವಲ್ಲದೆ, ಆ ಪ್ರಯತ್ನಗಳಲ್ಲಿ ಅವರಿಗೆ ಭಾರಿ ಯಶಸ್ಸು ಕೂಡ ಪ್ರಾಪ್ತವಾಯಿತು.

ಆದರೆ ‘ನಾನೊಬ್ಬ ಭಾರತೀಯ’ ಎಂದು ಹೆಮ್ಮೆಯಿಂದ ಹೇಳಿಕೊಂಡಾಗಲೆಲ್ಲ ಕೆಲವರು ಅವರತ್ತ ಅನುಮಾನದ ದೃಷ್ಟಿ ಹಾಯಿಸುತ್ತಿದ್ದರು. ಅಕ್ಷಯ್ ಕೆನಡಾ ಪೌರತ್ವ ಹೊಂದಿರುವುದೇ ಇಷ್ಟಕ್ಕೆಲ್ಲ ಕಾರಣ. ಆದರೆ ಈಗ ಅವರು ಮತ್ತೆ ಭಾರತೀಯ ಪೌರತ್ವ ಪಡೆಯಲು ನಿರ್ಧರಿಸಿದ್ದಾರಂತೆ.

ಈ ಸುದ್ದಿ ಹರಡುತ್ತಿದ್ದಂತೆಯೇ ಪರ-ವಿರೋಧದ ಮಾತುಗಳು ಜೋರಾಗಿ ಕೇಳಿ ಬರಲಾರಂಭಿಸಿವೆ. ಇತ್ತೀಚೆಗೆ ಸಂವಾದವೊಂದರಲ್ಲಿ ಭಾಗವಹಿಸಿದ್ದ ಅಕ್ಷಯ್ ಮಾತನಾಡುತ್ತ ಈ ವಿಚಾರ ಪ್ರಸ್ತಾಪಿಸಿದರು. ‘ನಾನೊಬ್ಬ ಭಾರತೀಯ. ಆದರೆ ಪ್ರತಿ ಬಾರಿ ಇದನ್ನು ಸಾಬೀತು ಪಡಿಸಬೇಕಾಗುವ ಸಂದರ್ಭ ಎದುರಾದಾಗ ನನಗೆ ನೋವಾಗುತ್ತದೆ. ನನ್ನ ಹೆಂಡತಿ-ಮಕ್ಕಳೂ ಭಾರತೀಯರು.

ನಾನು ತೆರಿಗೆ ಕಟ್ಟುವುದು ಇಲ್ಲಿ. ನನ್ನ ಜೀವನ ಇರುವುದೇ ಇಲ್ಲಿ’ ಎಂದು ಅವರು ಹೇಳಿದ್ದಾರೆ. ಪಂಜಾಬ್​ನಲ್ಲಿ ಹುಟ್ಟಿ, ದೆಹಲಿ ಮತ್ತು ಮುಂಬೈನಲ್ಲಿ ಬೆಳೆದು, ಬಾಲಿವುಡ್​ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ ಅಕ್ಷಯ್ ಕೆನಡಾ ಪೌರತ್ವ ಪಡೆದಿದ್ದು ಹೇಗೆ? ಈ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ. ‘ಒಂದು ಕಾಲದಲ್ಲಿ ನಾನು ನಟಿಸಿದ ಸತತ 14 ಸಿನಿಮಾಗಳು ಸೋತವು. ಆಗ ನನ್ನ ಸಿನಿಮಾ ಪಯಣ ಅಂತ್ಯವಾಯಿತು ಎಂದುಕೊಂಡೆ.

ಮುಂದೇನು ಎಂಬುದು ಗೊತ್ತಾಗಲಿಲ್ಲ. ಕೆನಡಾದಲ್ಲಿರುವ ನನ್ನ ಸ್ನೇಹಿತನೊಬ್ಬ ಒಟ್ಟಾಗಿ ಕೆಲಸ ಮಾಡಲು ಅಲ್ಲಿಗೆ ನನ್ನನ್ನು ಆಹ್ವಾನಿಸಿದ. ಆಗ ನಾನು ಕೆನಡಾ ಪಾಸ್​ಪೋರ್ಟ್ ಪಡೆಯಲು ತೀರ್ವನಿಸಿದೆ. ನಂತರ 15ನೇ ಸಿನಿಮಾ ಹಿಟ್ ಆಯಿತು, ಮತ್ತೆ ನಾನು ಹಿಂದಿರುಗಿ ನೋಡಲಿಲ್ಲ’ ಎಂದು ಅಕ್ಷಯ್ ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಈಗ ಅವರು ಮತ್ತೆ ಭಾರತೀಯ ಪೌರತ್ವ ಮರಳಿ ಪಡೆಯಲು ಅರ್ಜಿ ಸಲ್ಲಿಸಿದ್ದಾರಂತೆ. ಅವರ ಈ ನಿಲುವಿಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಟೀಕೆ ಮಾಡಿದ್ದಾರೆ. ‘ಸಿನಿಮಾ ಸೋತಾಗ ಭಾರತ ಬೇಡವಾಗಿತ್ತು, ಗೆಲುವು ಸಿಕ್ಕಾಗ ಮತ್ತೆ ಈ ದೇಶ ಬೇಕಾಯಿತಾ?’ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಅಕ್ಷಯ್ ಪರ-ವಿರೋಧವಾಗಿ ಹಲವು ಮೀಮ್ಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...