ನಿರ್ಭಯಾ ಪ್ರಕರಣದ ಇನ್ನೋರ್ವ ಅಪರಾಧಿ ಅಕ್ಷಯ್​ ಠಾಕೂರ್​ ಸಿಂಗ್​ನಿಂದ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ

blank

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ವಿನಯ್​ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ತಿರಸ್ಕರಿಸಿದ ಬೆನ್ನಲ್ಲೇ ಇನ್ನೋರ್ವ ಅಪರಾಧಿ ಅಕ್ಷಯ್​ ಠಾಕೂರ್​ ಸಿಂಗ್​ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ.

ಅಕ್ಷಯ್​ ಠಾಕೂರ್​ ಸಿಂಗ್​ ಈ ಹಿಂದೆ ಸುಪ್ರೀಂ ಕೋರ್ಟ್​ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದ. ಆದರೆ ಆ ಪತ್ರವನನ್ನು ನಿನ್ನೆ ಸಂಜೆ ಸುಪ್ರೀಂ ಕೋರ್ಟ್​ ತಿರಸ್ಕರಿಸಿತ್ತು. ಇದೀಗ ಅಪರಾಧಿ ರಾಷ್ಟ್ರಪತಿಗಳ ಮೊರೆ ಹೋಗಿದ್ದಾನೆ.

ಈ ಹಿಂದೆ ನೀಡಿದ್ದ ಆದೇಶದ ಪ್ರಕಾರ ಇಂದು (ಫೆ.1) ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕಿತ್ತು. ಆದರೆ ಗಲ್ಲು ಶಿಕ್ಷೆಯನ್ನು ತಡೆಯಬೇಕು ಎಂದು ವಕೀಲ ಎ.ಪಿ.ಸಿಂಗ್ ದೆಹಲಿಯ ಪಟಿಯಾಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಪರಾಧಿ ವಿನಯ್​ ಶರ್ಮಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಪತ್ರ ಬರೆದಿದ್ದರಿಂದಾಗಿ ಶಿಕ್ಷೆಯನ್ನು ತಡೆಹಿಡಿಯಲಾಗಿತ್ತು. ಇಂದು ಮುಂಜಾನೆ ರಾಷ್ಟ್ರಪತಿಗಳು ವಿನಯ್​ ಶರ್ಮಾ ಸಲ್ಲಿಸಿದ್ದ ಕ್ಷಮಾಧಾನ ಪತ್ರವನ್ನು ವಜಾ ಮಾಡಿದ್ದರು. ಅದರ ಬೆನ್ನಲ್ಲೇ ಇದೀಗ ಅಕ್ಷಯ್​ ಠಾಕೂರ್​ ಕೂಡ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. (ಏಜೆನ್ಸೀಸ್​)

Share This Article

ಬೇಸಿಗೆಯಲ್ಲಿ ಬಿಸಿ ಕಾಫಿ ಅಥವಾ ಕೋಲ್ಡ್ ಕಾಫಿ, ಯಾವುದು ಆರೋಗ್ಯಕ್ಕೆ ಒಳ್ಳೆಯದು? Hot Coffee OR Cold Coffee

Hot Coffee OR Cold Coffee: ಕಾಫಿ ಪ್ರಪಂಚದಲ್ಲೇ ಅತ್ಯಂತ ಪ್ರಿಯವಾದ ಪಾನೀಯಗಳಲ್ಲಿ ಒಂದಾಗಿದೆ. ಕೆಲವು…

ಶನಿವಾರ ಈ ತಪ್ಪುಗಳನ್ನು ಮಾಡಬೇಡಿ! ಬಡತನವನ್ನು ಆಹ್ವಾನಿಸಿದಂತೆ… Avoid These Mistakes On Saturday

Avoid These Mistakes On Saturday: ಶನಿವಾರದಂದು ಮಾಡುವ ಸಣ್ಣ ತಪ್ಪುಗಳು ಅನೇಕ ರೀತಿಯ ತೊಂದರೆಗಳಿಗೆ…

ಮದ್ವೆ ನಂತರ ಪುರುಷರಿಗೆ ಬೊಜ್ಜಿನ ಸಮಸ್ಯೆ ಹೆಚ್ಚಾಗಲು ಕಾರಣವೇನು ಗೊತ್ತಾ? Post Marriage Weight Gain In Men

Post Marriage Weight Gain In Men: ಮದುವೆಯ ನಂತರ ಪುರುಷರು ಮತ್ತು ಮಹಿಳೆಯರಲ್ಲಿ ಅನೇಕ…