18.5 C
Bangalore
Monday, December 16, 2019

ಉಗ್ರರ ನೆಲೆಯನ್ನು ಬಾಂಗ್ಲಾಗೆ ಸ್ಥಳಾಂತರಿಸಿದ ಪಾಕ್​: ಅಲ್ಲಿಂದಲೇ ಭಾರತದಲ್ಲಿ ದಾಳಿ ನಡೆಸಲು ಪ್ಲ್ಯಾನ್​

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ನವದೆಹಲಿ: ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಒಳಗೊಳಗೇ ಕುದಿಯುತ್ತಿರುವ ಪಾಕಿಸ್ತಾನ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸಂಚು ರೂಪಿಸುತ್ತಿದೆ. ಇದರ ಬೆನ್ನಲ್ಲೇ ತಮ್ಮ ನೆಲದಲ್ಲಿದ್ದ ಉಗ್ರರ ನೆಲೆಯನ್ನು ಬಾಂಗ್ಲಾದೇಶಕ್ಕೆ ಸ್ಥಳಾಂತರಿಸಿದೆ.

ಅಲ್​ ಖೈದಾ ಸಂಘಟನೆ ತನ್ನ ಕಾರ್ಯಾಚರಣೆಯ ವಿಧಾನಗಳನ್ನು ಬದಲಿಸಿಕೊಂಡಿದ್ದು, ಬಾಂಗ್ಲಾದೇಶದಲ್ಲಿ ತನ್ನ ನೆಲೆ ಸ್ಥಾಪಿಸಲು ಮುಂದಾಗಿದೆ. ಬಾಂಗ್ಲಾದಲ್ಲಿ ಕಾರ್ಯಚರಣೆ ಆರಂಭಿಸುವ ಮೂಲಕ ಭಾರತದೊಳಗೆ ಉಗ್ರ ದಾಳಿ ನಡೆಸಲು ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ನೆರವು ನೀಡುತ್ತಿದೆ ಎಂದು ತಿಳಿದು ಬಂದಿದೆ.

ಆ. 2 ರಂದು ಢಾಕಾದಲ್ಲಿರುವ ಮಸೀದಿಯೊಂದರಲ್ಲಿ ಅಲ್​ ಖೈದಾ ಸಂಘಟನೆ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಢಾಕಾದ ಜೈಲಿನಲ್ಲಿಉರವ ಅಲ್ ​ಖೈದಾದ ಮುಖಂಡ ಮೌಲಾನಾ ಮೋಯಿದ್ದೀನ್​ನನ್ನು ಬಿಡಿಸಿಕೊಂಡು ಬರುವ ಕುರಿತು ಚರ್ಚೆ ನಡೆದಿದೆ. ಮೊದಲಿಗೆ ಸಂಘಟನೆಯನ್ನು ಬಾಂಗ್ಲಾದೇಶದಲ್ಲಿ ಗಟ್ಟಿಯಾಗಿ ಬೇರೂರುವಂತೆ ಮಾಡಬೇಕು. ಆನಂತರ ಬಾಂಗ್ಲಾ ನೆಲದಿಂದ ಭಾರತದ ಮೇಲೆ ದಾಳಿ ಸಂಘಟಿಸಬೇಕು ಎಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಇದೇ ಸಂದರ್ಭದಲ್ಲಿ ಜಮಾನ್​ ಉಲ್​ ಮುಜಾಹಿದೀನ್​ ಬಂಗ್ಲಾದೇಶ (ಜೆಎಂಬಿ) ಮತ್ತು ಇಸ್ಲಾಮಿಕ್​ ಛಾತ್ರ ಶಿಬಿರ್​ (ಐಸಿಎಸ್​) ಸಂಘಟನೆಗಳ ಸದಸ್ಯರು ಪರಸ್ಪರ ಸಹಕಾರಕ್ಕಾಗಿ ಮಾತುಕತೆ ನಡೆಸಿದ್ದಾರೆ. ಇದರ ಅನ್ವಯ ಐಸಿಎಸ್​ ಸಂಘಟನೆಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ಜೆಬಿಎಂ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...